ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಇಂಫಾಲ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಹೇಯ ಕೃತ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಯುಮ್ಲೆಂಬಮ್ ನುಂಗ್ಸಿತೋಯ್ ಮೈತೆ (19) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಐವರನ್ನು ಬಂಧಿಸಿದ್ದು, ವೈರಲ್ ವೀಡಿಯೊದಲ್ಲಿ ಇರುವ ಶಂಕಿತರನ್ನು ಪತ್ತೆಹಚ್ಚಲು ಪೊಲೀಸರ ಬೇಟೆ ಮುಂದುವರೆದಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿ ಹುಯಿರೆಮ್ ಹೆರೊದಾಸ್ ಮೈತೆ ಸೇರಿದಂತೆ ನಾಲ್ವರನ್ನು ನಿನ್ನೆ ಬಂಧಿಸಲಾಗಿತ್ತು ಮುಖ್ಯಮಂತ್ರಿ ಎನ್.‌ ಬಿರೇನ್ ಸಿಂಗ್ ಅವರು ಶೋಧ ಕಾರ್ಯಾಚರಣೆಯನ್ನು ಖುದ್ದಾಗಿ ಗಮನಿಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ರಾಜ್ಯ ಸರ್ಕಾರ ಜನರಲ್ಲಿ ಮನವಿ ಮಾಡಿದೆ. “ಆಧಾರವಿಲ್ಲದ” ವೀಡಿಯೊಗಳ ಪ್ರಸಾರವನ್ನು ದೃಢೀಕರಿಸಲು ಜನರಿಗೆ ಸಹಾಯವಾಣಿ ಸಂಖ್ಯೆ ನೀಡಲಾಗಿದೆ. ಲೂಟಿ ಮಾಡಿದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೊಲೀಸರು ಅಥವಾ ಹತ್ತಿರದ ಭದ್ರತಾ ಪಡೆಗಳಿಗೆ ಹಿಂದಿರುಗಿಸುವಂತೆ ಸರ್ಕಾರ ಜನರಿಗೆ ಮನವಿ ಮಾಡಿದೆ.
ಮಣಿಪುರದ ಕಾಂಗ್‌ಪೋಕ್ಪಿಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಕಿರುಕುಳ ನೀಡುತ್ತಿರುವ ವಿಡಿಯೋ ಬುಧವಾರ ಬಹಿರಂಗವಾದ ನಂತರ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಈ ಘಟನೆ ಸಂಭವಿಸಿದೆ.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement