ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತು : ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ ಅಸಮಾಧಾನ

ಬೆಂಗಳೂರು:: ಕಾಂಗ್ರೆಸ್ ಹಿರಿಯ ನಾಯಕ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ (B K Hariprasad) ಮತ್ತೆ ಸುದ್ದಿಯಾಗಿದ್ದಾರೆ. ಪಕ್ಷದಲ್ಲಿ ತನಗೆ ಸೂಕ್ತ ಸ್ಥಾನಮಾನ ತಮಗೆ ಸಿಕ್ಕಿಲ್ಲ ಎಂದು ಸಭೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದ ಖಾಸಗಿ ಹೊಟೇಲಿನಲ್ಲಿ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಅವರು ತಮ್ಮ ಅಸಮಾದಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ನನಗೆ ಮುಖ್ಯಮಂತ್ರಿ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸುವುದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ. ನಾನು ಮಂತ್ರಿ ಆಗುವುದು ಬಿಡುವುದು ಬೇರೆ ಮಾತು. ಆದರೆ ನಾನು ಐವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವುದರಲ್ಲಿ ಪ್ರಮುಖ ಪಾತ್ರವಹಿಸಿದ್ದೇನೆ, ಆದರೆ ಸಮುದಾಯಕ್ಕೆ ನೀವೇನು ಕೊಟ್ಟಿದ್ದೀರಿ ಎಂದು ಬಹಿರಂಗವಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.
ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಸೇರಿದವರು. ಎಲ್ಲರೂ ಒಟ್ಟಿಗೆ ಸೇರಬೇಕು ಎಂದು 2013ರಲ್ಲಿ ನಾವು ಬೆಂಬಲ ಅವರಿಗೆ ಬೆಂಬಲ ಕೊಟ್ಟಿದ್ದೆವು. ಆದರೆ ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ರೂ. ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಹೇಳಿದವರು ಇದುವರೆಗೆ ಕೊಟ್ಟಿಲ್ಲ. ಸ್ವಾರ್ಥಕ್ಕೆ ನಾವು ಯಾವುದನ್ನೂ ಕೇಳಲ್ಲ ಎಂದು ಕಿಡಿಕಾರಿದ್ದಾರೆ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದ್ದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ ಎಂದು ಹರಿಪ್ರಸಾದ ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್​ ಉಚ್ಚಾಟನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement