ಭಾರೀ ಮಳೆ : ಇಂದು ಉತ್ತರ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 24ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ,ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದು ಕಾರವಾರ ಹಾಗೂ ಶಿರಸಿ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಇನ್ನೂ ಎರಡು ದಿನ (ಜುಲೈ 24 ಹಾಗೂ 25)ಜೋರು ಮಳೆ ಮುಂದುವಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿ ದಿನ ಸರಾಸರಿ 115 ರಿಂದ 206 ಮಿಮೀ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 50 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಮಾಹಿತಿ ನೀಡಲಾಗಿದೆ.
ಹೀಗಾಗಿ ಜಿಲ್ಲೆಯಲ್ಲಿ ಆರೇಂಜ್ ಎಚ್ಚರಿಕೆ ನೀಡಲಾಗಿದೆ. ಜುಲೈ 24 ರಂದು ಮೀನುಗಾರರು, ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಸಮುದ್ರಕ್ಕೆ ಇಳಿಯುವುದು, ಜಲಪಾತಗಳಿಗೆ ತೆರಳು ಮೋಜು, ಮಸ್ತಿ ಮಾಡುವುದನ್ನು ತಡೆಯಲು ಸೂಚಿಸಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement