ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ.
ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿದೆ. ಜುಲೈ 17-18ರ ಸಭೆಯಲ್ಲಿ ವಿಪಕ್ಷಗಳ ನಾಯಕರಿಗೆ ಶಿಷ್ಟಾಚಾರದ ಅಧಿಕಾರಿಗಳು ಎಂದು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸುವ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ-ಜೆಡಿಸ್ ಮನವಿಯಲ್ಲಿ ತಿಳಿಸಲಾಗಿತ್ತು.
ಕರ್ನಾಟಕದ ವ್ಯವಹಾರಗಳಿಗೆ ಸಂಬಂಧವಿಲ್ಲದ ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಪ್ರೋಟೋಕಾಲ್ ಅಧಿಕಾರಿಗಳು ಎಂದು ಘೋಷಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮನವಿ ಮಾಡಿದ್ದವು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement