ಭಾರೀ ಮಳೆ : ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಮುಳುಗಡೆ

ಮಂಗಳೂರು : ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಘಟ್ಟ ಪ್ರದೇಶಗಳಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.‌ ಲಗೇಜ್ ಕೊಠಡಿ, ಶೌಚಾಲಯ ಸೇರಿದಂತೆ ಎಲ್ಲವೂ ಮುಳುಗಡೆಯಾಗಿದೆ.
ಕುಮಾರಧಾರದ ಉಪನದಿ ದರ್ಪಣತೀರ್ಥ ತುಂಬಿ ಹರಿದು ಮಂಜೇಶ್ವರ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಪ್ರವಾಹದ ನೀರು ನುಗ್ಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಸುತ್ತಮುತ್ತಲಿನ ಪ್ರದೇಶದ ಅನೇಕ ಕಡೆ ಕೃಷಿ ತೋಟಗಳಿಗೆ ನದಿ ನೀರು ನುಗ್ಗಿದೆ.
ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ,ಅಡ್ಡಹೊಳೆ,ಸೋಮವಾರಪೇಟೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರಾ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ ಹೆಚ್ಚಿದೆ. ಹೀಗಾಗಿ ನದಿಯ ಅಕ್ಕಪಕ್ಕದ ಹೋಗದಂತೆ ದೇವಾಲಯದಿಂದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಕಾವಲು ಆಯೋಜಿಸಲಾಗಿದ್ದು, ಗೃಹರಕ್ಷಕ, ಎಸ್‌ಡಿಆರ್‌ಎಫ್ ತಂಡ ನಿಯೋಜನೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement