ಭಾರೀ ಮಳೆ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವೆಡೆ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ ನಂತರ ರಾಜ್ಯದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ಧಾರವಾಡ, ಕೊಡಗು ಸೇರಿದಂತೆ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಸೋಮವಾರ (ಜುಲೈ 24) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದ ಹಿನ್ನೆಲೆ ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ ಶಾಲಾ‌, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆ ರಜೆ
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಜಿಲ್ಲೆಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಶಿವಮೊಗ್ಗ ಡಿಡಿಪಿಐ ಪರಮೇಶ್ವರಪ್ಪ ಆದೇಶಿಸಿದ್ದಾರೆ. ಅನುದಾನಿತ, ಅನುದಾನ ರಹಿತ ಶಾಲೆಗಳಿಗೂ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಮೂರು ತಾಲೂಕಿನ ಶಾಲೆಗಳಿಗೆ ರಜೆ
ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದ ಹಿನ್ನೆಲೆ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಮತ್ತು ಹಾಸನ ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ರಜೆ…
ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 24ರ ಸೋಮವಾರ(ನಾಳೆ) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.
ಹಾವೇರಿ ಜಿಲ್ಲೆಯಲ್ಲಿ ರಜೆ
ಹಾವೇರಿ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದ ಹಿನ್ನೆಲೆ ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹೈಸ್ಕೂಲ್, ಪಿಯುಸಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರ ವರೆಗೂ ಮಳೆಯಾಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಿದೆ. ಅದೇ ರೀತಿ ಯಾದಗಿರಿ, ಹಾಸನ, ಕಲಬರಗಿ, ಬೆಳಗಾವಿ, ಬೀದರ್, ಧಾರವಾಡ​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಪ್ರಮುಖ ಸುದ್ದಿ :-   ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement