ಈಗ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ‘ಸೀಮೆ’ ದಾಟಿ ಪಾಕಿಸ್ತಾನಕ್ಕೆ ಹೋದ ಭಾರತೀಯ ಮಹಿಳೆ

ನವದೆಹಲಿ: ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪಬ್‌ ಜಿ ಪ್ರೇಮಿಗಾಗಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿರುವುದು ಈಗ ದೇಶಾದ್ಯಂತ ಸುದ್ದಿಯಾಗಿರುವಾಗಲೇ ಇದೀಗ ಭಾರತೀಯ ಮಹಿಳೆಯೊಬ್ಬರು ತನ್ನ ಪ್ರೇಮಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಹೋದ ಸುದ್ದಿ ಈಗ ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.
ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ ಸ್ನೇಹಿತ(ಪ್ರೇಮಿ..?)ನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿ ತಿಳಿಸಿದೆ.
ಅಂಜು ಎಂದು ಗುರುತಿಸಲಾದ ಮಹಿಳೆ, ಕೆಲವು ದಿನಗಳ ಕಾಲ ಜೈಪುರಕ್ಕೆ ಹೋಗುವುದಾಗಿ ಪತಿ ಅರವಿಂದ ಅವರಿಗೆ ತಿಳಿಸಿದ್ದಾಳೆ. ಆದರೆ ಭಾನುವಾರ ಅರವಿಂದ ಅವರಿಗೆ ಅಂಜು ಗಡಿ ದಾಟಿ ಹೋಗಿರುವುದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ಅಂಜು ತಮ್ಮೊಂದಿಗೆ ವಾಟ್ಸಾಪ್ ಮೂಲಕ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ಅರವಿಂದ್ ಹೇಳಿದ್ದಾರೆ. ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಅವರಿಗೆ ಕರೆ ಮಾಡಿ ತಾನು ಲಾಹೋರ್‌ನಲ್ಲಿದ್ದೇನೆ ಮತ್ತು ಎರಡು-ಮೂರು ದಿನಗಳಲ್ಲಿ ಹಿಂತಿರುಗುವುದಾಗಿ ತಿಳಿಸಿದ್ದಾಳೆ ಎಂದು ಅವರು ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಅಂಜು ಅವರ ಪ್ರೇಮಿಯ ಬಗ್ಗೆ ಕೇಳಿದಾಗ, ಅರವಿಂದ್ ಅವರಿಗೆ ಅದರ ಬಗ್ಗೆ ಅರಿವಿದೆ ಎಂದು ಹೇಳಿದರು ಮತ್ತು ಅವರ ಪತ್ನಿ ತನ್ನ ಬಳಿಗೆ ಹಿಂತಿರುಗುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಅರವಿಂದ್ ಭಿವಾಡಿಯಲ್ಲಿ ಕೆಲಸ ಮಾಡುತ್ತಿದ್ದು, ಅಂಜು ಖಾಸಗಿ ಸಂಸ್ಥೆಯೊಂದರಲ್ಲಿ ಬಯೋಡೇಟಾ ಎಂಟ್ರಿ ಆಪರೇಟರ್ ಉದ್ಯೋಗದಲ್ಲಿದ್ದಾಳೆ.

ಪ್ರಮುಖ ಸುದ್ದಿ :-   ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ವಿದೇಶದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸಿದ್ದರಿಂದ 2020 ರಲ್ಲಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಳು ಎಂದು ಅರವಿಂದ ಅವರನ್ನು ಉಲ್ಲೇಖಿಸಿ
ಇಂಡಿಯಾ ಟುಡೆ ವರದಿ ಮಾಡಿದೆ.
ಇಬ್ಬರು ಮಕ್ಕಳನ್ನು ಹೊಂದಿರುವ ಅಂಜು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಅರವಿಂದ ಅವರನ್ನು ಮದುವೆಯಾಗಿದ್ದಾರೆ. ಅರವಿಂದ ಅವರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಅಂಜು ಅವರ ಸಹೋದರನೊಂದಿಗೆ ಭಿವಾಡಿಯಲ್ಲಿ ಬಾಡಿಗೆ ಫ್ಲಾಟ್‌ನಲ್ಲಿ ಇದ್ದಾರೆ.
ರಾಜಸ್ಥಾನದಿಂದ ಪಾಕಿಸ್ತಾನಕ್ಕೆ
ಗುರುವಾರ ಅಂಜು ಜೈಪುರಕ್ಕೆ ಹೋಗುವ ನೆಪದಲ್ಲಿ ಭಿವಾಡಿಯಲ್ಲಿರುವ ತನ್ನ ಮನೆಯಿಂದ ಹೊರಟಿದ್ದಳು. ನಂತರ ಆಕೆ ತನ್ನ 29 ವರ್ಷದ ಫೇಸ್‌ಬುಕ್ ಸ್ನೇಹಿತ ನಸ್ರುಲ್ಲಾ ಎಂಬವರನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತೆರಳಿದ್ದಾಳೆ ಎಂದು ವರದಿಯಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವ ನಸ್ರುಲ್ಲಾ ಮತ್ತು ಅಂಜು ಕೆಲವು ತಿಂಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸ್ನೇಹಿತರಾದರು ಎಂದು ಪಾಕಿಸ್ತಾನದ ARY ನ್ಯೂಸ್ ವರದಿ ಮಾಡಿದೆ. ಆಕೆ ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಳು, ಆದರೆ ಆಕೆಯ ಪ್ರಯಾಣ ದಾಖಲೆಗಳನ್ನು ಪರಿಶೀಲಿಸಿದ ನಂತರ ಬಿಡುಗಡೆ ಮಾಡಲಾಯಿತು.
ಎಲ್ಲಾ ಪ್ರಯಾಣದ ದಾಖಲೆಗಳು ಸರಿಯಾಗಿವೆ ಎಂದು ಕಂಡುಬಂದ ನಂತರ ಆಕೆಗೆ ಹೋಗಲು ಅನುಮತಿ ನೀಡಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಅವರಿಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement