ಭಾರೀ ಮಳೆ ಹಿನ್ನೆಲೆ: ಜುಲೈ 25ರಂದು ಉತ್ತರ ಕನ್ನಡ ಜಿಲ್ಲೆಯ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಹಾಗೂ ಪದವಿ ಪೂರ್ವ ಕಾಲೇಜ್‌ಗಳಿಗೆ ಜುಲೈ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 25ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಇದು ಕಾರವಾರ ಹಾಗೂ ಶಿರಸಿ ಎರಡೂ ಶೈಕ್ಷಣಿಕ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.   ಜುಲೈ 25ರ ಮಧ್ಯಾಹ್ನ 1ರಿಂದ ಹಾಗೂ 26ರ ಬೆಳಿಗ್ಗೆ ವರೆಗೆ ಭಾರೀ ಮಳೆಯಾಗುವ ಮುನ್ಸೂನೆ ಇರುವುದರಿಂದ ರಜೆ ನೀಡಲಾಗಿದೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್....: 9 ಮಂದಿ 'ಪಾಕಿಸ್ತಾನ ಗೂಢಚಾರರ' ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement