ಕುಂದಾಪುರ: ಅರಶಿಣಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ನೀರು ಪಾಲಾದ ಯುವಕ

ಉಡುಪಿ : ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತಕುಮಾರ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಈತ ಅರಶಿನಗುಂಡಿ ಜಲಪಾತ ನೊಡಲು ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ವೀಡಿಯೊ ಮಾಡುವ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ.
ಜೊತೆಯಲ್ಲಿದ್ದ ಸ್ನೇಹಿತ ತಕ್ಷಣ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಹುಡುಕಿದರೂ ಇದುವರೆಗೆ ಮೃತ ದೇಹ ಪತ್ತೆಯಾಗಿಲ್ಲ.

https://twitter.com/Karnatakarains/status/1683373511564476416?ref_src=twsrc%5Etfw%7Ctwcamp%5Etweetembed%7Ctwterm%5E1683373511564476416%7Ctwgr%5Edce35a0c953dd65ac17d25682c1909df8461de66%7Ctwcon%5Es1_&ref_url=https%3A%2F%2Fwww.hindustantimes.com%2Fcities%2Fbengaluru-news%2Fkarnataka-man-washes-away-at-arasinagundi-falls-while-making-instagram-reels-video-101690189156373.html

ಶರತ ಅವರು ಕೆಳಗೆ ಬೀಳುತ್ತಿರುವ ದೃಶ್ಯವು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಕುಟುಂಬ ಕೂಡ ಕೊಲ್ಲೂರಿಗೆ ತಲುಪಿದೆ.
ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಿದೆ ಮತ್ತು ಈಗಾಗಲೇ ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಐಎಂಡಿ ಕರಾವಳಿ ಕರ್ನಾಟಕದಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ.

ಪ್ರಮುಖ ಸುದ್ದಿ :-   ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement