ಉತ್ತರ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿ ನೇಮಕ

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಗಂಗೂಬಾಯಿ ರಮೇಶ ಮಾನಕರ ಅವರನ್ನು ನೇಮಕ ಮಾಡಲಾಗಿದೆ. ದಾವಣಗೆರೆ ಜಿಲ್ಲಾಧಿಕಾರಿಯಾಗಿ ವೆಂಕಟೇಶ ಎಂ.ವಿ. ಅವರನ್ನು ನೇಮಕ ಮಾಡಲಾಗಿದೆ.
ಗಂಗೂಬಾಯಿ ಮಾನಕರ ಅವರು 1998 ರ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿದ್ದಾರೆ. 2012ರಲ್ಲಿ ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದಿದ್ದಾರೆ. ಅವರು ಸದ್ಯ ಕರ್ನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಕುಮಟಾ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.
ಪ್ರಭುಲಿಂಗ ಕವಳಿಕಟ್ಟಿ ಅವರು 9 ತಿಂಗಳ ಹಿಂದಷ್ಟೇ ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದರು. ಈಗ ಅವರಿಗೆ ಸ್ಥಳ ನಿಯೋಜನೆ ಮಾಡಿಲ್ಲ.
ವೆಂಕಟೇಶ ಎಂ.ವಿ.ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅವರು ಶಿವಾನಂದ ಕಾಪಶಿ ಅವರ ಬದಲಿಗೆ ನಿಯೋಜನೆಗೊಂಡಿದ್ದಾರೆ.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

ನಿಮ್ಮ ಕಾಮೆಂಟ್ ಬರೆಯಿರಿ

advertisement