ಕಾರವಾರ : ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಶೀಲ್ದಾರ ಅವರಿಗೆ ಶಾಲಾ-ಕಾಲೇಜುಗಳಿಗೆ ರಜೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ