ನನ್ನ ಹೆಸರಲ್ಲಿ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರ ಫೇಕ್ : ಶಾಸಕ ಬಿ.ಆರ್‌. ಪಾಟೀಲ ಸ್ಪಷ್ಟನೆ

ಬೆಂಗಳೂರು: ಶಾಸಕರ ಕುಂದುಕೊರತೆ ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ತಾವು ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿದ್ದಾರೆ ಎಂದು ಆಳಂದ ಶಾಸಕ ಬಿ.ಆರ್‌. ಪಾಟೀಲ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಇದೊಂದು ಫೇಕ್‌ ಲೆಟರ್‌ ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಉದ್ದೇಶಪೂರ್ವಕವಾಗಿ ಕುತಂತ್ರ ಮಾಡಿ ಸುಳ್ಳುಗಳನ್ನು ಹರಿಬಿಡಲಾಗಿದೆ ಎಂದು ಅವರು ಹೇಳಿದ್ದಾರೆ.
ನಾನು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಸಂಬಂಧವಿಲ್ಲ. ಈ ಫೇಕ್ ಲೆಟರ್‌ನಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ಫೇಕ್ ಲೆಟರ್ ನಲ್ಲಿ ನನ್ನ ಹಳೆಯ ಮನೆಯ ವಿಳಾಸ ನೀಡಲಾಗಿದೆ. ಪತ್ರವನ್ನು ಡಿಜಿಟಲ್ ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್ ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ. ನನ್ನ ಎಲ್ಲಾ ಅಧಿಕೃತ ಪತ್ರಗಳಲ್ಲಿ ಕ್ರಮ ಸಂಖ್ಯೆಯನ್ನು ಪೂರ್ವನಿಯೋಜಿತವಾಗಿ ಪ್ರಿಂಟ್ ಮಾಡಿರಲಾಗುತ್ತದೆ. ಇದು ನಕಲಿ ಪತ್ರ ಎಂಬುದಕ್ಕೆ ಅಷ್ಟು ಸಾಕು ಎಂದು ಶಾಸಕ ಬಿ.ಆರ್. ಪಾಟೀಲ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನದಂ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

ಇದು ನನ್ನ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಮನಸ್ಥಾಪ ಹಚ್ಚಲು ಮಾಡಿದ ಕುತಂತ್ರದಂತೆ ತೋರುತ್ತದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕೂಡ ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಕೊಡುತ್ತೇನೆ ” ಎಂದೂ ಶಾಸಕ ಬಿ.ಆರ್ ಪಾಟೀಲ್ ತಿಳಿಸಿದ್ದಾರೆ.
ನಕಲಿ ಬಗ್ಗೆ ಟ್ವೀಟ್‌ ಮೂಲಕ ಕಾಂಗ್ರೆಸ್‌ ಕಿಡಿ
ಮುಖ್ಯಮಂತ್ರಿಗೆ ಶಾಸಕರ ಪತ್ರದ ಕುರಿತು ಟ್ವೀಟ್‌ ಮಾಡಿರುವ ಕೆಪಿಸಿಸಿ, ” ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ. ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಮೊರೆ ಹೋಗಿವೆ. ಶಾಸಕ ಬಿ.ಆರ್.ಪಾಟೀಲ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ ಮಾಡುತ್ತೇವೆ ಎಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ ಎಂದು ಕಿಡಿಕಾರಿದೆ.
ಶಾಸಕ ಬಿಆರ್‌ ಪಾಟೀಲ್‌ ಹೆಸರಿನಲ್ಲಿದ್ದ ಪತ್ರದಲ್ಲಿ ರಾಜ್ಯ ಸರ್ಕಾರದ ಸಚಿವರು ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುತ್ತಿಲ್ಲ. ಮಾತ್ರವಲ್ಲದೇ, 3ನೇ ವ್ಯಕ್ತಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬರೆಯಲಾಗಿತ್ತು. ಯಾವುದೇ ಸಚಿವರ ಹೆಸರು ಉಲ್ಲೇಖಿಸಿರಲಿಲ್ಲ.

ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷದಿಂದ ಸ್ಪರ್ಧೆ ; ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement