ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವರ ಮೇಲೆ ಶಾಸಕರ ಅತೃಪ್ತಿ…?: ಜುಲೈ 27ಕ್ಕೆ ಸಿಎಲ್‌ಪಿ ಸಭೆ

ಬೆಂಗಳೂರು : ಜುಲೈ 27 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ಕರೆಯಲಾಗಿದೆ, ಅಲ್ಲಿ ಶಾಸಕರು ತಮ್ಮ ಕೆಲಸದ ಮನವಿ ಅರ್ಜಿಗಳಿಗೆ ಸಚಿವರು ಸ್ಪಂದಿಸುತ್ತಿಲ್ಲ ಹಾಗೂ ತಮ್ಮ ಯಾವುದೇ ಕೆಲಸ ಅಗುತ್ತಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸುವ ಸಾಧ್ಯತೆಯಿದೆ.
ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ. ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಸಚಿವರ ವರ್ಗಾವಣೆ ಮತ್ತು ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಕಾರಣಕ್ಕೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಲಾಗಿದೆ ಎನ್ನಲಾಗಿದೆ. 20ಕ್ಕೂ ಹೆಚ್ಚು ಹಿರಿಯ ಶಾಸಕರು ಪತ್ರಕ್ಕೆ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ.
ಇದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಅಹವಾಲು ಆಲಿಸಲು ಜುಲೈ.27ರಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ.
ಸಿಎಲ್‌ಪಿ ಸಭೆಯಲ್ಲಿ ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕುಮಟಾ : ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮದಲ್ಲಿ ಪಂ.ಗಣಪತಿ ಭಟ್ಟ ಹಾಸಣಗಿಗೆ ʼಸೌರಭ ರಾಷ್ಟ್ರೀಯ ಸಮ್ಮಾನ್‌ʼ ಪ್ರದಾನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement