ಭಾರೀ ಮಳೆ : ಜುಲೈ 26 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಮಂಗಳೂರು/ ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಾಳಿ ಸಹಿತ ಅಬ್ಬರದ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದೆ, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 26ರ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಉಡುಪಿ ವರದಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಬುಧವಾರ ಭಾರೀ ಮಳೆ ಮುನ್ಸೂಚನೆ ನೀಡಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement