ಉಡುಪಿ ; ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವೀಡಿಯೊ ಚಿತ್ರೀಕರಣದ ಘಟನೆಗೆ ಸಂಬಂಧಿಸಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ.
ವೀಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತವಾಗಿ ದೂರು ನೀಡಬೇಕು, ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಗ್ರ ತನಿಖೆಗೆ ಆಗ್ರಹ ಕೇಳಿಬಂದ ಬೆನ್ನಲ್ಲೇ, ಮಲ್ಪೆ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಿಸಲಾಗಿದೆ.
ಆರೋಪಿಗಳ ವಿರುದ್ದ ಭಾರತೀಯ ದಂಡ ಸಂಹಿತೆ 509, 204, 175,34, ಮತ್ತು 66(ಇ) ಅಡಿ ದೂರು ದಾಖಲಾಗಿದೆ.
ಘಟನೆ ಹಿನ್ನೆಲೆ: ಉಡುಪಿಯ ಕಾಲೇಜೊಂದರ ಟಾಯ್ಲೆಟ್‌ನಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಭಿನ್ನ ಕೋಮಿಗೆ ಸೇರಿದ ವಿದ್ಯಾರ್ಥಿನಿಯನ್ನು ಅಸಭ್ಯವಾಗಿ ವೀಡಿಯೊದಲ್ಲಿ ಚಿತ್ರೀಕರಣ ಮಾಡಿದ್ದರು. ಇದು ಕಾಲೇಜಿನ ಗಮನಕ್ಕೆ ಬಂದು ಆರೋಪಿ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ . ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ 3 ಮಂದಿ ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದಾರೆ. ತಮಾಷೆಗಾಗಿ ವೀಡಿಯೋ ಮಾಡಿರುವುದಾಗಿ ಮೂವರು ಲಿಖಿತವಾಗಿ ಹೇಳಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಘಟನೆ ಬಗ್ಗೆ ಸ್ಪಷ್ಟನೆ ನೀಡಿತ್ತು.

ಪ್ರಮುಖ ಸುದ್ದಿ :-   ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement