ನಿಪ್ಪಾಣಿ : ಮೊಬೈಲ್​ ಚಾರ್ಜ್ ಹಾಕುವಾಗ ವಿದ್ಯುತ್ ಪ್ರವಹಿಸಿ ಯುವಕ ಸಾವು

ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್‌ ತಗುಲಿ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ.
ಮೃತನನ್ನು ಆಕಾಶ ಶಿವದಾಸ ಸಂಕಪಾಳ (27) ಎಂದು ಗುರುತಿಸಲಾಗಿದೆ. ಈತ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ ಬಳವಂತ ನಿಪ್ಪಾಣಿ ಪೊಲೀಸರಿಗೆ ದೂರು ನೀಡಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement