ಕಾಲೇಜ್ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಚಿತ್ರೀಕರಣ ಪ್ರಕರಣ : ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿದ ಖುಷ್ಬು

ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದಾರೆ. ಅವರು ಸುಮಾರು ಒಂದೂವರೆ ತಾಸು ಉಡುಪಿ ಜಿಲ್ಲಾಧಿಕಾರಿ ಹಾಗೂ ಎಸ್‌.ಪಿ.ಜೊತೆ ಮಾತುಕತೆ ನಡೆಸಿದ್ದಾರೆ.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ಇಷ್ಟೊಂದು ವೈರಲ್ ಆಗಲು ಕಾರಣವೇನು ಎಂಬುದರ ಬಗ್ಗೆ ಗಮನ ಹರಿಸಬೇಕು. ಅನೇಕ ಸಂಗತಿಗಳ ಬಗ್ಗೆ ತನಿಖೆ ನಡೆಯಬೇಕಿದೆ. ಪೂರಕ ಸಾಕ್ಷಿಗಳ ಸಂಗ್ರಹ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಗುರುವಾರ ನಾನು ಕಾಲೇಜಿಗೆ ಭೇಟಿಯಾಗಿ ಆಡಳಿತ ಮಂಡಳಿಯ ಜೊತೆ ಮಾತನಾಡಬೇಕಿದೆ. ಆ ಬಳಿಕ ಘಟನೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಈ ಘಟನೆಯನ ಇಟ್ಟುಕೊಂಡು ಅನೇಕ ನಕಲಿ ವೀಡಿಯೊಗಳು ಹರಿದಾಡುತ್ತಿವೆ. ಹರಿದಾಡುತ್ತಿರುವ ವೀಡಿಯೊಗಳಲ್ಲಿ ಯಾವುದು ಸತ್ಯವಲ್ಲ. ಇವರಿಗೆ ಯಾವುದೇ ವೀಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿ ಯಾವುದೇ ವೀಡಿಯೊ ಕಂಡು ಬಂದಿಲ್ಲ. ಸಂಬಂಧಪಟ್ಟ ಮೊಬೈಲ್ ಗಳನ್ನು ಪೊಲೀಸರು ರೆಟ್ರೀವ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
40 ಗಂಟೆಗಳ ಕಾಲ ರೆಟ್ರಿವ್ ಮಾಡಿದರೂ ಏನು ಪತ್ತೆಯಾಗಿಲ್ಲ. ಮೂರು ಮೊಬೈಲ್‌ಗಳ ಡಾಟಾ ಸಂಗ್ರಹ ಮಾಡಲಾಗಿದೆ. ಮೊಬೈಲ್‌ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮೊಬೈಲ್ ಕಳುಹಿಸಬೇಕಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಕ್ಷ್ಯ ಲಭ್ಯವಾದರೆ ವೀಡಿಯೊ ಬಗ್ಗೆ ಸ್ಷಷ್ಟತೆ ಸಿಗಬಹುದು. ಅಲ್ಲಿಯವರೆಗೆ ಆ ವಿದ್ಯಾರ್ಥಿನಿಯರನ್ನು ಆರೋಪಿತರು ಎಂದಷ್ಟೆ ಕರೆಯಬಹುದು ಎಂದು ಹೇಳಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾದ ಮೂರು ವಿದ್ಯಾರ್ಥಿನಿಯರ ಅಮಾನತು ಮಾಡಲಾಗಿದೆ. ಈ ಪ್ರಕರಣಕ್ಕೆ ಟೆರರ್ ಲಿಂಕ್ ಇದೆ ಎಂದು ವಾಟ್ಸಾಪ್ ಸಂದೇಶಗಳು ಹರಿದಾಡುತ್ತಿವೆ. ಪ್ರಕರಣದ ಬಗ್ಗೆ ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವುದು ಬೇಡ. ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣವು ಎಳೆಯ ಮನಸ್ಸುಗಳು ಒಳಗೊಂಡಿವೆ. ಹೀಗಾಗಿ ಸೂಕ್ಷ್ಮತೆಯಿಂದ ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ...

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement