ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವೀಡಿಯೊ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವೀಡಿಯೊ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಇಂದು ಶುಕ್ರವಾರ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮಪ್ರಕಾಶ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.
ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳೊಂದಿಗೆ ತಲಾ 20,000ರೂ. ಬಾಂಡ್ ಮೇಲೆ ಕೋರ್ಟ್ ಜಾಮೀನು ಮೂವರಿಗೆ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement