ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 13 ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್‌, ಕಲಬುರಗಿ ಜಿಲ್ಲೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕಳೆದ ವಾರಗಳಿಗೆ ಹೋಲಿಕೆ ಮಾಡಿದರೆ ಮಳೆ ಪ್ರಮಾಣ ಕಡಿಮೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

4 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು : ಮಂಟಪದಲ್ಲೇ ಮುರಿದು ಬಿತ್ತು ಮದುವೆ…!

ನಿಮ್ಮ ಕಾಮೆಂಟ್ ಬರೆಯಿರಿ

advertisement