ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಕುಟುಂದವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದ ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿದ್ದಾರೆ ಎಂದು ಬಿಜೆಪಿ (BJP) ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಇಂದು, ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ರಾಜ್ಯ ಕಾಂಗ್ರೆಸ್ ಟ್ವೀಟ್ ವಿರೋಧಿಸಿ ಟ್ವೀಟ್ ಹಾಕುವ ಭರದಲ್ಲಿ ಶಕುಂತಲಾ ಅವರ ಸಿದ್ದರಾಮಯ್ಯ ಅವರ ಕುಟುಂಬದ ಸದಸ್ಯರನ್ನು ಉಲ್ಲೇಖಿಸಿಆಕ್ಷೇಪಾರ್ಹ ಪದಗಳನ್ನು ಬಳಸಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ಕೆಲ ವಿದ್ಯಾರ್ಥಿನಿಯರು ಮೊಬೈಲ್ ಇಟ್ಟು ಮತ್ತೊಬ್ಬ ವಿದ್ಯಾರ್ಥಿನಿಯ ವೀಡಿಯೋ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿಬಂದಿದೆ.. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರ ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ತನಿಖೆಗಾಗಿ ರವಾನಿಸಲಾಗಿದೆ. ಈ ಬಗ್ಗೆ ಮಾಹಿತಿ ಕಲೆಹಾಕಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾದ ಖುಷ್ಬೂ ಸುಂದರ ಅವರ ಬುಧವಾರವೇ ಉಡುಪಿಗೆ ಆಗಮಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ