ಸಿಎಂ ಕುಟುಂಬದ ಮಹಿಳೆಯರ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ: ಬಂಧಿಸಿದ್ದ ಬಿಜೆಪಿ ಕಾರ್ಯಕರ್ತೆಯ ಬಿಡುಗಡೆ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಸೆರೆ ಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು  ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಇಂದು, ಶುಕ್ರವಾರ ಬೆಳಿಗ್ಗೆ ಬಂಧಿತರಾಗಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ ಅವರನ್ನು ಬೆಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವಿಚಾರವಾಗಿ ಗುರುವಾರ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್‌ ಮಾಡಿದ್ದರು ಎಂದು ಆರೋಪಿಸಿ ಹೈಗ್ರೌಂಡ್ಸ್ ಪೊಲೀಸ್‌ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು.
ನಂತರ ತುಮಕೂರಿಗೆ ತೆರಳಿ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement