ಸಿಜೆಐ,ಮಣಿಪುರ ಹಿಂಸಾಚಾರದ ಬಗ್ಗೆ ಕಾಮೆಂಟ್‌ : ಬರಹಗಾರ ಬದ್ರಿ ಶೇಷಾದ್ರಿ ಬಂಧನ

ಚೆನ್ನೈ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ರಾಜಕೀಯ ವಿಶ್ಲೇಷಕ ಮತ್ತು ಪ್ರಕಾಶಕ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕಳೆದ ವಾರ ಜುಲೈ 22 ರಂದು ಅವರು ಅಧಾನ್ ತಮಿಳು ಯೂಟ್ಯೂಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ನೀಡಿದ ಹೇಳಿಕೆಗಳಿಗಾಗಿ ಅವರ ಬಂಧನವಾಗಿದೆ. ಕಾರ್ಯಕ್ರಮದಲ್ಲಿ ಅವರು ಮಣಿಪುರ ಹಿಂಸಾಚಾರ, ಕುಕಿಗಳು, ಮೈತೆಯ್‌ಗಳು, ನಾಗಾಗಳು ಮತ್ತು ಮಣಿಪುರ ಹಿಂಸಾಚಾರದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ಪಾತ್ರಗಳ ಬಗ್ಗೆ ಮಾತನಾಡಿದ್ದರು.
ಪೆರಂಬಲೂರು ಜಿಲ್ಲೆಯ ಕುನ್ನಂ ನಿವಾಸಿ, ವಕೀಲ ಕವಿಯರಸು ನೀಡಿದ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ. ಸಂದರ್ಶನದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಬದರಿ ಅವರು ಮಾತನಾಡಿರುವ ರೀತಿ ಬೇಸರ ತಂದಿದೆ ಎಂದು ಕವಿಯರಸು ದೂರಿನಲ್ಲಿ ತಿಳಿಸಿದ್ದಾರೆ.
ಸಂದರ್ಶನದಲ್ಲಿ, ಬದ್ರಿ ಅವರು ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನ ನಿಲುವನ್ನು ಟೀಕಿಸಿದರು. ಬದ್ರಿ ಅವರು ಸಿಜೆಐ ಸ್ಥಾನವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ, ಅವರು ಸುಪ್ರೀಂ ಕೋರ್ಟ್ ಮತ್ತು ದೇಶದ ನ್ಯಾಯಾಂಗ ವ್ಯವಸ್ಥೆಯ ಗೌರವವನ್ನು ಸಹ ಕೆಡಿಸಿದ್ದಾರೆ ಎಂದು ಕವಿಯರಸು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಬಂಧನವನ್ನು ಖಂಡಿಸಿದ ತಮಿಳುನಾಡಿ ಬಿಜೆಪಿ ಮುಖ್ಯಸ್ಥ ಕೆ.ಅಣ್ಣಾಮಲೈ, ಆಡಳಿತಾರೂಢ ಡಿಎಂಕೆ ಸಾಮಾನ್ಯ ಜನರು ವ್ಯಕ್ತಪಡಿಸುವ ಅಭಿಪ್ರಾಯಗಳನ್ನು ನಿಭಾಯಿಸಲು ಸಾಧ್ಯವಾಗದೆ ಬಂಧನಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಟ್ವಿಟರ್‌ನಲ್ಲಿ ಅವರು, “ಆಡಳಿತ ಡಿಎಂಕೆಯ ಪ್ರತೀಕಾರದ ಅಜೆಂಡಾವನ್ನು ನಿರ್ವಹಿಸುವುದು ಪೊಲೀಸರ ಜವಾಬ್ದಾರಿಯೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಮುಖ ಸುದ್ದಿ :-   ಪರೀಕ್ಷೆಯಲ್ಲಿ ಫೇಲ್‌ ಆದ್ರೂ 2 ವರ್ಷ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ಮಹಿಳೆ..! ಸಬ್-ಇನ್ಸ್‌ಪೆಕ್ಟರ್ ಆಗಿ‌ ಪೋಸ್‌...!!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement