ಬಿಜೆಪಿ ಕೇಂದ್ರ ಪದಾಧಿಕಾರಿಗಳಲ್ಲಿ ಮಹತ್ವದ ಬದಲಾವಣೆ : ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ. ರವಿಗೆ ಕೊಕ್ -ರಾಜ್ಯಾಧ್ಯಕ್ಷ ಸ್ಥಾನ..?

ನವದೆಹಲಿ: ಮುಂಬರುವ ಲೋಕಸಭೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿ ಇರಿಸಿಕೊಂಡು ಬಿಜೆಪಿ ತನ್ನ ಸಂಘಟನಾ ರಚನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಕರ್ನಾಟಕದ ನಾಯಕ ಸಿ.ಟಿ. ರವಿ ಮತ್ತು ಅಸ್ಸಾಂನ ಲೋಕಸಭಾ ಸಂಸದ ದಿಲೀಪ ಸೈಕಿಯಾ ಅವರನ್ನು ತನ್ನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿರುವ ಬಿಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿದೆ. ಕೇಂದ್ರೀಯ ಪದಾಧಿಕಾರಿ ಹುದ್ದೆಯಿಂದ ರವಿ ಅವರನ್ನು ಕೆಳಗಿಳಿಸಿದ್ದರ ಹಿಂದೆ ರಾಜ್ಯಾಧ್ಯಕ್ಷ ಹುದ್ದೆ ಕೊಡುವ ಉದ್ದೇಶವೂ ಇದೆ ಎಂಬ ಮಾತುಗಳಿವೆ.

ಬಿಜೆಪಿಯ ಕೇಂದ್ರ ಪದಾಧಿಕಾರಿಗಳ ತಂಡದಲ್ಲಿ ಸಮಗ್ರ ಬದಲಾವಣೆ ಮಾಡಲಾಗಿದ್ದು, 38 ನಾಯಕರನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಸಿಟಿ ರವಿ ಅವರ ಸ್ಥಾನಕ್ಕೆ ಮಧ್ಯಪ್ರದೇಶ ಬಿಜೆಪಿ ನಾಯಕ ಕೈಲಾಶ ವಿಜಯವರ್ಗಿಯ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ತಂಡಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
ಈಗ ಉತ್ತರ ಪ್ರದೇಶದ ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾಗಿರುವ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ, ಈ ನಿರ್ಧಾರವು ಪಸ್ಮಾಂಡ ಮುಸ್ಲಿಮರನ್ನು ತಲುಪಲು ಪಕ್ಷದ ಪ್ರಯತ್ನವಾಗಿದೆ.

ಹೊಸ ಪಟ್ಟಿಯಲ್ಲಿ ಬಹುತೇಕ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳನ್ನು ಅವರ ಉದ್ದೆಯಲ್ಲಿ ಉಳಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್. ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಶಿವ ಪ್ರಕಾಶ್ ಅವರನ್ನು ಮುಂದುವರಿಸಲಾಗಿದೆ
ಮಾಜಿ ಮುಖ್ಯಮಂತ್ರಿಗಳಾದ ವಸುಂಧರಾ ರಾಜೇ ಮತ್ತು ರಮಣ್ ಸಿಂಗ್ ಸೇರಿ ಒಟ್ಟು 38 ಪದಾಧಿಕಾರಿಗಳನ್ನು ವಿವಿಧ ಸ್ಥಾನಗಳಿಗೆ ನೇಮಿಸಲಾಗಿದೆ. ಬಿಹಾರದ ಲೋಕಸಭಾ ಸಂಸದ, ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಎ.ಕೆ. ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಮಾಜಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ ಮತ್ತು ರಾಜ್ಯಸಭಾ ಸಂಸದ ರಾಧಾ ಮೋಹನ್ ಅಗರವಾಲ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ಮತ್ತು ಜಾರ್ಖಂಡ್‌ನಲ್ಲಿ ಬಿಜೆಪಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ ವಾರಗಳ ನಂತರ ಈ ಬದಲಾವಣೆ ಬಂದಿದೆ.

ಪ್ರಮುಖ ಸುದ್ದಿ :-   'ಹಾವಿನ ತಲೆಗಾಗಿ ಹೋಗಿದ್ದೇವೆ....': ಪಾಕ್ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯ ಬಗ್ಗೆ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಿ.ಟಿ ರವಿ, ವಿಪಕ್ಷ ನಾಯಕನ ಹುದ್ದೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರನ್ನು ಬಿಜೆಪಿ ಪರಿಗಣಿಸಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದ್ದರು. ಇದರ ಬೆನ್ನಲ್ಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೋಕ್ ನೀಡಲಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ಬಿಜೆಪಿ ಮೂರು ಹುದ್ದೆಗಳು ನಿರ್ಧಾರವಾಗಲಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯದ ಮುಖಂಡರಿಗೆ ಹಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಸಮುದಾಯದ ಮುಖಂಡರಿಗೆ ಹಾಗೂ ಪರಿಷತ್ ವಿಪಕ್ಷ ನಾಯಕನ ಸ್ಥಾನವನ್ನು ಹಿಂದುಳಿದ ಸಮುದಾಯಕ್ಕೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement