ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮದುವೆ ವಿಚಾರ ಆಗಾಗ ಪ್ರಸ್ತಾಪವಾಗುತ್ತಿರುತ್ತದೆ. ಮುದವೆ ವಿಚಾರದ ಬಗ್ಗೆ ಸಂದರ್ಶನಗಳಲ್ಲಿ ಹಲವು ಸಲ ಪ್ರಶ್ನೆ ಕೇಳಿದಾಗ ರಾಹುಲ್ ಗಾಂಧಿ ಅವರೇ ಉತ್ತರಿಸಿದ್ದಾರೆ. ಇದೀಗ ರಾಹುಲ್ ಗಾಂಧಿ ಮದುವೆ ಯಾವಾಗ ಎಂದು ಮಹಿಳೆಯೊಬ್ಬಳು ರಾಹುಲ್ ಗಾಂಧಿ ಸೋನಿಯಾ ಗಾಂಧಿ ಅವರನ್ನೇ ಕೇಳಿದ್ದಾರೆ ಹರಿಯಾಣದ ಸೋನಿಪತ್ ರೈತ ಮಹಿಳೆಯೊಬ್ಬರು ರಾಹುಲ್ ಗಾಂಧಿಗೆ ಮದುವೆ ಯಾವಾಗ ಎಂದು ತಾಯಿ ಸೋನಿಯಾ ಗಾಂಧಿ ಬಳಿ ಕೇಳಿದ್ದಾರೆ. ಇದರ ವಿಡಿಯೋ ತುಣುಕುಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.
ಇತ್ತೀಚೆಗೆ ಮಹಿಳೆಯರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ತಮ್ಮ ನಿವಾಸದಲ್ಲಿ ರೈತ ಮಹಿಳೆಯರಿಗೆ ಭೋಜನಕೂಟ ಏರ್ಪಡಿಸುವ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರೈತ ಮಹಿಳೆಯರನ್ನ ಪ್ರಿಯಾಂಕಾ ಗಾಂಧಿ ಮನೆಗೆ ಆಹ್ವಾನಿಸಿದ್ದರು ಹಾಗೂ ಸೋನಿಯಾ ಗಾಂಧಿ ಜೊತೆಗೆ ಭೋಜನಕ್ಕೆ ವ್ಯವಸ್ಥೆ ಮಾಡಿದ್ದರು. ಮನೆಗೆ ಬಂದ ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ರಾಹುಲ್ ಗಾಂಧಿ ಅವರ ಮದುವೆ ಯಾವಾಗ ಮಾಡುತ್ತೀರಾ ಎಂದು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ ʻನೀವೇ ಹುಡುಗಿಯನ್ನ ಹುಡುಕಿ..ʼ ಎಂದು ಚಟಾಕಿ ಹಾರಿಸಿದ್ದಾರೆ. ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೊ ಹಂಚಿಕೊಂಡಿದ್ದಾರೆ.
ಔತಣ ಕೂಟದ ವೇಳೆ ಮಹಿಳೆಯರ ಜೊತೆಗೆ ಆಹಾರ, ಮಹಿಳಾ ಸಬಲೀಕರಣ ಮತ್ತು GST ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸರ್ಕಾರ ನನ್ನ ಮನೆಯನ್ನು ಕಿತ್ತುಕೊಂಡ ಕಾರಣ ಪ್ರಿಯಾಂಕಾ ಗಾಂಧಿ ಅವರ ಮನೆಗೆ ಆಹ್ವಾನಿಸಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ವೀಡಿಯೊದಲ್ಲಿ, ರಾಹುಲ್ ಗಾಂಧಿ ಮಧ್ಯಾಹ್ನದ ಊಟವನ್ನು ನೀಡುತ್ತಿದ್ದಾರೆ. ನಿಮಗೆ ಊಟ ಇಷ್ಟವಾಯಿತೇ ಎಂದು ಕೇಳುತ್ತಿದ್ದಾರೆ. ಮಕ್ಕಳು ಮತ್ತು ಹುಡುಗಿಯರಿಗೆ ಚಾಕೊಲೇಟುಗಳನ್ನು ವಿತರಿಸುವುದನ್ನು ಸಹ ಕಾಣಬಹುದು. ಈ ವೇಳೆ ಮಹಿಳೆ ಸೋನಿಯಾ ಗಾಂಧಿ ಬಳಿ ರಾಹುಲ್ ಗಾಂಧಿ ಅವರಿಗೆ ಯಾವಾಗ ಮದುವೆ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಆಗ ಸೋನಿಯಾ ಗಾಂಧಿ ಐಕಾನಿಕ್ ಉತ್ತರ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ