‘ಕ್ಷಮಿಸು ಮಗಳೇ’: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಂದ ನಂತರ ಕೇರಳ ಪೊಲೀಸರ ಕ್ಷಮೆಯಾಚನೆ

ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಂದ ನಂತರ ಕೇರಳ ಪೊಲೀಸರು ಶನಿವಾರ ಎಕ್ಸ್‌ (ಹಳೆಯ ಟ್ವಿಟರ್‌)ನಲ್ಲಿ ಕ್ಷಮೆಯಾಚಿಸಿದ್ದಾರೆ.
ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ರಾತ್ರಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಮೀಪದ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಎಸೆದಿದ್ದ ಐದು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಆರೋಪಿಯನ್ನು ತಡರಾತ್ರಿ ಬಂಧಿಸಲಾಗಿದೆ.
“ಕ್ಷಮಿಸಿ ಮಗಳೇ (Sorry daughter)” ಎಂದು ಕೇರಳ ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಮಗುವನ್ನು ಸುರಕ್ಷಿತವಾಗಿ ಪೋಷಕರ ಬಳಿಗೆ ಕರೆತರುವ ಪ್ರಯತ್ನ ವ್ಯರ್ಥವಾಯಿತು ಎಂದು ವಿಷಾದಿಸಿದ್ದಾರೆ. ಮಗುವನ್ನು ಜೀವಂತವಾಗಿ ಆಕೆಯ ಪೋಷಕರ ಬಳಿಗೆ ತರಲು ನಾವು ನಡೆಸಿದ ಪ್ರಯತ್ನಗಳು ವಿಫಲವಾಗಿವೆ. ಮಗುವನ್ನು ಅಪಹರಿಸಿದ ಶಂಕಿತನನ್ನು ಬಂಧಿಸಲಾಗಿದೆ” ಎಂದು ಮಲಯಾಳಂನಲ್ಲಿ ಪೋಸ್ಟ್ ಮಾಡಲಾಗಿದೆ.
ಶವಪರೀಕ್ಷೆ ವರದಿಯನ್ನು ಉಲ್ಲೇಖಿಸಿದ ಪೊಲೀಸ್ ಅಧಿಕಾರಿಯೊಬ್ಬರು, ಐದು ವರ್ಷದ ಮಗುವನ್ನು ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಬಾಲಕಿ ಬಿಹಾರ ಮೂಲದ ದಂಪತಿಯ ಪುತ್ರಿಯಾಗಿದ್ದು, ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಳು. ಒಂದು ದಿನದ ನಂತರ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಬಿಹಾರ ಮೂಲದ ಆರೋಪಿ ಕಾರ್ಮಿಕನನ್ನು ಬಂಧಿಸಿದ್ದಾರೆ, ಆತ ಮಗುವಿನ ಕುಟುಂಬ ವಾಸಿಸುತ್ತಿದ್ದ ಕಟ್ಟಡದ ಮೊದಲ ಮಹಡಿಯಲ್ಲಿ ಕೊಠಡಿಯಲ್ಲಿ ತಂಗಿದ್ದ.
ಆರಂಭದಲ್ಲಿ ಆರೋಪಿ ಕುಡಿದ ಅಮಲಿನಲ್ಲಿದ್ದ ಕಾರಣ ಆತನನ್ನು ವಿಚಾರಣೆಗೊಳಪಡಿಸಲು ಮತ್ತು ವಿವರಗಳನ್ನು ಸಂಗ್ರಹಿಸಲು ಪೊಲೀಸರಿಗೆ ಕಷ್ಟವಾಯಿತು. ಶನಿವಾರ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ.”ನಾವು ರಾತ್ರಿ 7:10 ಕ್ಕೆ ದೂರು ಸ್ವೀಕರಿಸಿದ್ದೇವೆ ಮತ್ತು ಶುಕ್ರವಾರ ರಾತ್ರಿ 8 ಗಂಟೆಗೆ ಮೊದಲು ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮ ತಂಡವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಮಗು ಕಾರ್ಮಿಕನೊಂದಿಗೆ ಇರುವುದು ಕಂಡುಬಂದಿದೆ. ನಾವು ಆತನನ್ನು ರಾತ್ರಿ 9:30 ಕ್ಕೆ ಬಂಧಿಸಿದ್ದೇವೆ. ಆದರೆ, ಆತ ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ಮತ್ತು ಮಗು ಆತನೊಂದಿಗೆ ಇರಲಿಲ್ಲ ಎಂದು ಎರ್ನಾಕುಲಂ ಗ್ರಾಮಾಂತರ ಎಸ್ಪಿ, ವಿವೇಕಕುಮಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

https://twitter.com/TheKeralaPolice/status/1685238309721903104?ref_src=twsrc%5Etfw%7Ctwcamp%5Etweetembed%7Ctwterm%5E1685238309721903104%7Ctwgr%5Ee8f0adf98fc583225c9057fc944ce06952a62db3%7Ctwcon%5Es1_&ref_url=https%3A%2F%2Fwww.indiatoday.in%2F

ವಿಪಕ್ಷ ಕಾಂಗ್ರೆಸ್ ರಾಜ್ಯ ಪೊಲೀಸರ ಮೇಲೆ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು ಮತ್ತು ಮಗುವನ್ನು ಪತ್ತೆಹಚ್ಚುವಲ್ಲಿ ಅವರ ಕಡೆಯಿಂದ ಲೋಪವಾಗಿದೆ ಎಂದು ಆರೋಪಿಸಿತು. ಆದರೆ, ಅಪರಾಧದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಅಸೆಂಬ್ಲಿ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಮಾತನಾಡಿ, ಮಗು ಆಲುವಾ ಪಟ್ಟಣದಲ್ಲೇ ಇದ್ದು, ಸಮಯಕ್ಕೆ ಸರಿಯಾಗಿ ಪತ್ತೆಯಾಗಿಲ್ಲ.
“ಇತ್ತೀಚಿನ ದಿನಗಳಲ್ಲಿ ಮಕ್ಕಳೂ ಸುರಕ್ಷಿತವಾಗಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮಾದಕ ದ್ರವ್ಯ ಮತ್ತು ಮದ್ಯದ ಅತಿಯಾದ ಬಳಕೆ ಈ ಅಪರಾಧಕ್ಕೆ ಕಾರಣವಾಯಿತು ಎಂದು ಪೊಲೀಸರು ಪ್ರತಿಪಾದಿಸುತ್ತಾರೆ” ಎಂದು ಸತೀಶನ್ ಹೇಳಿದರು. ಸಮಾಜದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದ ಅವರು, ಎಡ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮಗುವಿನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಒತ್ತಾಯಿಸಿದರು.

ಪ್ರಮುಖ ಸುದ್ದಿ :-   ಪುತ್ತೂರು | ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ ; ಬಿಜೆಪಿ ಮುಖಂಡನ ಪುತ್ರ ಅರೆಸ್ಟ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement