ಕೊಲೆ ಸಾಕ್ಷಿ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ವಕೀಲನನ್ನು ಬಂಧಿಸಿದ ಪೊಲೀಸರು

ನವದೆಹಲಿ : ದೇಶಾದ್ಯಂತ ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ ಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ನ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು, ಭಾನುವಾರ ಬಂಧಿಸಿದ್ದಾರೆ.
ಶೂಟರ್ ಉಮೇಶ್ ಪಾಲ್ ಇರುವ ಸ್ಥಳದ ಮಾಹಿತಿಯನ್ನು ವಕೀಲ ವಿಜಯ ಮಿಶ್ರಾ ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶನಿವಾರ ತಡರಾತ್ರಿ ಲಕ್ನೋದ ಹೊಟೇಲ್ ಹಯಾತ್ ಲೆಗಸಿಯಿಂದ ಅವರನ್ನು ಬಂಧಿಸಲಾಗಿದೆ.
ಹಾಡಹಗಲೆ ನಡೆದ ಉಮೇಶ ಪಾಲ್ ಹತ್ಯೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿತ್ತು. ಘಟನೆಯ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಮಾಫಿಯಾವನ್ನು ನಾಶಪಡಿಸುವುದಾಗಿ ರಾಜ್ಯ ವಿಧಾನಸಭೆಯಲ್ಲಿ ಪ್ರತಿಜ್ಞೆ ಮಾಡಿದರು.

5 / 5. 2

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement