ಬೆಂಗಳೂರು : ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಇಂದು, ಭಾನುವಾರ ಮಾತನಾಡಿದ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಿದ್ದಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಈಗ ನಾನು ಬಿಜೆಪಿ ರಾಷ್ಟ್ರೀಯ ʼಮಾಜಿʼ ಪ್ರಧಾನ ಕಾರ್ಯದರ್ಶಿ ಅಷ್ಟೆ. ರಾಜ್ಯಾಧ್ಯಕ್ಷ ಸ್ಥಾನ ಎಂಬುದು ಬಲು ದೊಡ್ಡ ಜವಾಬ್ದಾರಿ. ಅದರ ಬಗ್ಗೆ ನಿರೀಕ್ಷೆ ಮತ್ತು ಆಕಾಂಕ್ಷೆ ನನಗಿಲ್ಲ. ರಾಜ್ಯಾಧ್ಯಕ್ಷ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.
ಬಿಜೆಪಿಯ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಟ್ಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಹುದ್ದೆ ಶಾಶ್ವತವಾಗಿ ಇರುವುದಿಲ್ಲ. ನನಗೆ ಹಲವಾರು ಹುದ್ದೆಗಳ ಜವಾಬ್ದಾರಿ ನೀಡಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತ. ಆಗಲೂ ಕಾರ್ಯಕರ್ತನಾಗಿದ್ದೆ, ಈಗಲೂ ಕಾರ್ಯಕರ್ತನೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ