ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಮಿತ್‌ ಶಾ ಪುತ್ರನಿಂದ ಆಶ್ಲೇಷ ಬಲಿ ಸೇವೆ

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಹಾಗೂ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಕುಟುಂಬಸ್ಥರೊಂದಿಗೆ ಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸ್ತಿದ್ಧಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಶ್ಲೇಷ ಬಲಿ ಸಮರ್ಪಣೆ ಮಾಡಿದರು.
ಈ ವೇಳೆ ಅವರ ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು ಸಹ ಇದ್ದರು. ಈ ವೇಳೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಅವರು ಜೊತೆಗಿದ್ದರು. ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು. ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಅರ್ಚಕ ಸತ್ಯನಾರಾಯಣ ನೂರಿತ್ತಾಯರು ಜಯ್‌ ಶಾ ಅವರಿಗೆ ಶಾಲು ಹೊದೆಸಿ ಮಹಾಪ್ರಸಾದ ನೀಡಿದರು.
ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಶ್ರೀ ದೇವರ ದರ್ಶನ ಪಡೆದದ್ದು ಅತೀವ ಸಂತೋಷ ತಂದಿದೆ. ನನಗೆ ಶ್ರೀ ದೇವರ ದರ್ಶನ ಮಾಡಿ ಸೇವೆ ನೆರವೇರಿಸಲು ವ್ಯವಸ್ಥೆ ಮಾಡಿಕೊಟ್ಟ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ಮತ್ತು ದೇವಳದ ಆಡಳಿತ ಮಂಡಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಪ್ರಮುಖ ಸುದ್ದಿ :-   ಜೋಗಿ, ಕಬ್ಬಿನಾಲೆ, ಶಿವಾನದಂ ಹೆಗಡೆಗೆ ಕೆರೆಮನೆ ʼಮಹಾಬಲ ಪ್ರಶಸ್ತಿʼ ಪ್ರಕಟ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement