ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ.
ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.
ಈಗ ಆಸ್ಪತ್ರೆಗಳನ್ನು ಪರಿಶೀಲನೆ ನಡೆಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ದಿಢೀರ್ ಭೇಟಿ ಕೊಡುತ್ತೇನೆ. ಹೊರಗಿನಿಂದ ಬಂದು ಆಸ್ಪತ್ರೆಯಲ್ಲಿ ಹಸ್ತಕ್ಷೇಪ ಮಾಡುವುದು ತಪ್ಪು. ಆಸ್ಪತ್ರೆಗಳಲ್ಲಿ ತೊಂದರೆ ಆಗುತ್ತಿದೆ ಎಂಬುದನ್ನು ಪರಿಶೀಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
ಬೆಂಗಳೂರು ಸಿಟಿ ರೌಂಡ್ಸ್ ಹಾಕುತ್ತಿದ್ದ ವೇಳೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ನಾನು ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೇನೆ. ಇಲ್ಲಿ ಸ್ವಚ್ಚತೆ, ಡಾಕ್ಟರ್​ಗಳ ಹಾಜರಾತಿ ಬಗ್ಗೆ ಸಾಮಾಜಿಕ ಕಾರ್ಯಕರ್ತನ ಮೂಲಕ ದೂರು ಬಂದಿತ್ತು. ವಿಧಾನಸಭೆಯಲ್ಲಿ ಜಯನಗರ ಆಸ್ಪತ್ರೆಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದೆ. ಆದೇ ರೀತಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದರು.

ಪ್ರಮುಖ ಸುದ್ದಿ :-   ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನಕ್ಕೆ ನಿರ್ಬಂಧ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement