ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಆಗಸ್ಟ್ 3ರಂದು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಿದ್ದರಾಮಯ್ಯ ಆಗಸ್ಟ್ 3 ರಂದು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದೇ ದಿನ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ.
ಅಲ್ಲದೆ, 2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಆಗಸ್ಟ್ 2 ರಂದು ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರೊಂದಿಗೆ ಪಕ್ಷದ ವರಿಷ್ಠರನ್ನು ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ನಿಮಿತ್ತ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದು, ಅದರಲ್ಲಿ ಭಾಗವಹಿಸುವ ಸಾಧ್ಯತೆಯಿದೆ.
ನಿಮ್ಮ ಕಾಮೆಂಟ್ ಬರೆಯಿರಿ