ಉಡುಪಿ ಕಾಲೇಜಿನ ವೀಡಿಯೊ ಪ್ರಕರಣ: ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಭವಿಸಲ್ಲ- ಸಿಎಂ ಸಿದ್ದರಾಮಯ್ಯ

ಮಂಗಳೂರು : ಉಡುಪಿ ಕಾಲೇಜೊಂದರ ಶೌಚಾಲಯದಲ್ಲಿ ವಿದ್ಯಾರ್ಥನಿಯೊಬ್ಬಳ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವೈ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿ ಮಾಡುತ್ತಿದ್ದಾರೆ. ಹೀಗಿರುವಾಗ ಈ ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು, ಸೋಮವಾರ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದು ಎಂದು ವಿಚಾರ ಮಾಡಲಾಗುವುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಪ್ರತಿಕ್ರಯಿಸಿದ ಅವರು, ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.
ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಮುಖ ಸುದ್ದಿ :-   ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement