ರಾಜ್ಯದ ಈ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಸದ್ಯ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಆಗಸ್ಟ್ ತಿಂಗಳ 3ರಿಂದ 5ರ ವರೆಗೆ ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ ಹಾಗೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸಹಿತ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅದೇರೀತಿ ಉತ್ತರ ಒಳನಾಡಿನ ಬೀದರ, ಕಲಬುರಗಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಹುಗುರದಿಂದ ಸಾಧಾರಣೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement