ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣದ ಕುರಿತು ಕನ್ನಡದ ನಟ ದುನಿಯಾ ವಿಜಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.
ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ, ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ” ಎಂದು ಬರೆದು ಪೋಸ್ಟ್ ಮಾಡಿದ್ದು, ಈ ಮೂಲಕ ಸೌಜನ್ಯ ಕೊಲೆ ಪ್ರಕರಣದ ಕುರಿತು ತಮ್ಮ ಅಸಮಾಧಾನವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಸ್ಟೀಸ್ ಫಾರ್ ಸೌಜನ್ಯ ಎಂದು ಹ್ಯಾಶ್ ಟ್ಯಾಗ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ