ಆಗಸ್ಟ್​ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ

ಬೆಂಗಳೂರು: ಆಗಸ್ಟ್‌ 5ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಎಂದು ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಸರಾಸರಿ ಬಳಸುವ ಯೂನಿಟ್‌ ವಿದ್ಯುತ್ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದರೆ, ಮನೆಯ ಗ್ರಾಹಕರು ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಸರಾಸರಿಗಿಂತ ಹೆಚ್ಚಿನ ಯೂನಿಟ್ ಬಳಸಿದರೆ, ಹೆಚ್ಚುವರಿ ಯೂನಿಟ್‌ಗೆ ಮಾತ್ರ ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಸರಾಸರಿ 200ಕ್ಕೂ ಹೆಚ್ಚು ಯೂನಿಟ್ ಬಳಸಿದರೆ ಪೂರ್ಣ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ಈವರೆಗೆ 1.42 ಲಕ್ಷ ಕೋಟಿ ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ‘ಜುಲೈ 27ರ ಮೊದಲು ಅರ್ಜಿ ಸಲ್ಲಿಸಿದವರು ಮಾತ್ರ ಜುಲೈ ತಿಂಗಳ ವಿದ್ಯುತ್ ಬಳಕೆಯ ಶುಲ್ಕದಲ್ಲಿ ಲಾಭ ಪಡೆಯಲು ಅರ್ಹರಾಗಿರುತ್ತಾರೆ. ಜುಲೈ 27ರ ನಂತರ ಅರ್ಜಿ ಸಲ್ಲಿಸಿದವರು ಆಗಸ್ಟ್‌ನಲ್ಲಿ ಅವರ ಬಳಕೆಯ ಆಧಾರದ ಮೇಲೆ ಸೆಪ್ಟೆಂಬರ್‌ನ ಬಿಲ್ಲಿಂಗ್‌ನಲ್ಲಿ ಪ್ರಯೋಜನ ಪಡೆಯುತ್ತಾರೆ,”ಎಂದರು.
ಇದು ಇಂಧನ ಇಲಾಖೆಯ ಯೋಜನೆಯಲ್ಲ. ಇದು ಸರ್ಕಾರದ ಯೋಜನೆ. ಆದ್ದರಿಂದ ಇಂಧನ ಇಲಾಖೆಯ ಮೇಲೆ ಯಾವುದೇ ಹೊರೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು ನಾವು ಎಷ್ಟು ಬಿಲ್ ಕೊಡುತ್ತೇವೋ ಅಷ್ಟೂ ಬಿಲ್ಲನ್ನು ಸರ್ಕಾರವೇ ಸಬ್ಸಿಡಿ ರೂಪದಲ್ಲಿ ಕೊಡಲಿದೆ ಎಂದು ತಿಳಿಸಿದರು.
ಗೃಹಜ್ಯೋತಿ’ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಆ.5ರಂದು ಕಲಬುರಗಿಯ ಕಲಬುರಗಿಯ ಎನ್‌ವಿ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement