ಆಸ್ಪತ್ರೆಯಲ್ಲಿ ಯುವಕ ಸಾವು: ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದಿರುವ ಶಂಕೆ, 78 ಮಂದಿ ಅಸ್ವಸ್ಥ

ಚಿತ್ರದುರ್ಗ: ವಾಂತಿ-ಬೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಮೃತಪಟ್ಟಿದ್ದು, ಈತನೂ ತಾಲೂಕಿನ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಲುಷಿತ ನೀರು ಸೇವೆನೆಯಿಂದ ಅಸ್ವಸ್ಥರ ಸಂಖ್ಯೆ 78ಕ್ಕೆ ಏರಿಕೆಯಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.
ಯುವಕ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾನೆ. ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಶಂಕಿತರ ಸಂಖ್ಯೆ ಮೂರಕ್ಕೇರಿದೆ ಎಂದು ವರದಿಯಾಗಿದೆ. ಅಸ್ವಸ್ಥರನ್ನು ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 18 ಮತ್ತು ಬಸವೇಶ್ವರ ಖಾಸಗಿ ಆಸ್ಪತ್ರೆಯಲ್ಲಿ 60 ಜನರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಕವಾಡಿಗರಹಟ್ಟಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದೇವೆ. ಕುಡಿಯುವ ನೀರು ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿದೆ. ಕವಾಡಿಗರಹಟ್ಟಿಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಮಂಜುಳಾ ಸಾವಿನ ಕಾರಣ ಏನೆಂಬುದು ಪರೀಕ್ಷೆ ಬಳಿಕ ತಿಳಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement