ಐಬಿಪಿಎಸ್‌ನಿಂದ 3049 ಬ್ಯಾಂಕ್‌ ಪಿಒ, ಎಂಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್‌ಗಳಲ್ಲಿ ನೇಮಕಾತಿ ಮಾಡಬೇಕಾದ ಸಂಭಾವ್ಯ 3049 ಪ್ರೊಬೇಷನರಿ ಆಫೀಸರ್ ಹಾಗೂ ಮ್ಯಾನೇಜ್ಮೆಂಟ್‌ ಟ್ರೈನಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಪರೀಕ್ಷೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ ಅರ್ಹತೆಗಳು : ದಿನಾಂಕ 01-08-2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳು.
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಲಿಂಕ್‌ : IBPS PO/MT Exam 2023 – Apply Online
ಅರ್ಜಿ ಶುಲ್ಕ ವಿವರ
ಜೆನೆರಲ್ ಕೆಟಗರಿ ಅಭ್ಯರ್ಥಿಗಳಿಗೆ 850 ರೂ.ಗಳು
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 850 ರೂ.ಗಳು
SC / ST / PWD ಅಭ್ಯರ್ಥಿಗಳಿಗೆ 175 ರೂ.ಗಳು
ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-08-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 21-08-2023
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ : 21-08-2023
ಪರೀಕ್ಷೆ ಪೂರ್ವಭಾವಿ ತರಬೇತಿಗೆ ಪ್ರವೇಶ ಪತ್ರ ಬಿಡುಗಡೆ: ಸೆಪ್ಟೆಂಬರ್ 2023
ಪರೀಕ್ಷೆ ಪೂರ್ವ ತರಬೇತಿ ನಡೆಸುವ ಅವಧಿ : ಸೆಪ್ಟೆಂಬರ್ 2023
ಪೂರ್ವ ಭಾವಿ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ : ಸೆಪ್ಟೆಂಬರ್ 2023
ಪ್ರಿಲಿಮ್ಸ್ ಆನ್‌ಲೈನ್‌ ಪರೀಕ್ಷೆ ದಿನಾಂಕ : ಸೆಪ್ಟೆಂಬರ್ / ಅಕ್ಟೋಬರ್ 2023
ಆನ್‌ಲೈನ್‌ ಪ್ರಿಲಿಮ್ಸ್‌ ಪರೀಕ್ಷೆ ಫಲಿತಾಂಶ ದಿನಾಂಕ: ಅಕ್ಟೋಬರ್ 2023
ಹೆಚ್ಚಿನ ಮಾಹಿತಿಗೆ ಈ ಲಿಂಕ್‌ https://www.ibps.in/crp-specialist-officers-xiii/ ಕ್ಲಿಕ್‌ ಮಾಡಿ ನೋಡಬಹುದು
ಪಿಒ / ಎಂಟಿ ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಪಿಒ/ಎಂಟಿ ಆನ್‌ಲೈನ್‌ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ : ಅಕ್ಟೋಬರ್ /ನವೆಂಬರ್ 2023
ಆನ್‌ಲೈನ್‌ ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್ 2023
ಮುಖ್ಯ ಪರೀಕ್ಷೆ ಫಲಿತಾಂಶ ದಿನಾಂಕ: ಡಿಸೆಂಬರ್ 2023
ಸಂದರ್ಶನಕ್ಕೆ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಜನವರಿ / ಫೆಬ್ರುವರಿ 2024
ಸಂದರ್ಶನ ನಡೆಸುವ ದಿನಾಂಕ: ಜನವರಿ / ಫೆಬ್ರುವರಿ 2024
ಪ್ರಾವಿಷನಲ್ ಅಲಾಟ್ಮೆಂಟ್ : ಏಪ್ರಿಲ್ 2024

ಪ್ರಮುಖ ಸುದ್ದಿ :-   ತಾಯಿ, ಹೆಂಡತಿ, ಮೂವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ...

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement