ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈಗ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನಾಲ್ಕು ನಿಗಮಗಳಿಗೆ ಒಟ್ಟಾಗಿ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85 ಕೋಟಿ ರೂ., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWRTC) 32.57 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ (KKRTC) 23.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ನಾಲ್ಕು ನಿಗಮಗಳಿಗೂ ಪ್ರತ್ಯೇಕವಾಗಿ ಹಣ ಬಿಡುಗಡೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement