ಚಿತ್ರದುರ್ಗ: ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣ; ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸೇರಿ ಇಬ್ಬರು ಮೃತಪಟ್ಟಿರುವ ಹಾಗೂ 70ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡು, ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಚಿತ್ರದುರ್ಗದ  ಹೊರವಲಯದ ಕವಾಡಿಗರಹಟ್ಟಿಯ 17 ನೇ ವಾರ್ಡ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಓರ್ವ ಮಹಿಳೆ ಹಾಗೂ ಓರ್ವ ಪುರುಷ ಮೃತಪಟ್ಟಿದ್ದಾರೆ. ಇನ್ನು 70ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾಖಲಾದವರಲ್ಲಿ ಕೆಲವರು ತೀವ್ರವಾಗಿ ಅಸ್ವಸ್ಥರಾಗಿದ್ದು ಕೆಲವರು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರನ್ನು ದಾವಣಗೆರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement