ಪುಣೆಯಲ್ಲಿ 5 ವರ್ಷಗಳ ಅವಧಿಗೆ ಕಚೇರಿ ಗುತ್ತಿಗೆಗೆ ಪಡೆದ ಎಲಾನ್ ಮಸ್ಕ್‌ ನ ಟೆಸ್ಲಾ ಕಂಪನಿ

ಎಲೋನ್ ಮಸ್ಕ್ ಅವರ ಟೆಸ್ಲಾ ಇಂಡಿಯಾ ಮೋಟಾರ್ ಮತ್ತು ಎನರ್ಜಿ ಪ್ರೈವೇಟ್ ಲಿಮಿಟೆಡ್ ಪುಣೆಯಲ್ಲಿ ಕಚೇರಿ ಸ್ಥಳವನ್ನು ಬಾಡಿಗೆಗೆ ತೆಗೆದುಕೊಂಡಿದೆ. ಕಂಪನಿಯ ಅಧಿಕಾರಿಗಳು ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಸ್ಥಾಪಿಸುವ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದ ಒಂದು ವಾರದ ನಂತರ ಈ ಮಾಹಿತಿ ಬಂದಿದೆ. ಪುಣೆಯ ವಿಮಾನ ನಗರದಲ್ಲಿರುವ ಪಂಚಶೀಲ ಬ್ಯುಸಿನೆಸ್ ಪಾರ್ಕ್‌ನಲ್ಲಿ ಕಚೇರಿ ಸ್ಥಳಕ್ಕಾಗಿ ಐದು ವರ್ಷಗಳ ಗುತ್ತಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಮಾಧ್ಯಮ ವರದಿಯ ಪ್ರಕಾರ, ಟೆಸ್ಲಾದ ಭಾರತೀಯ ಅಂಗ ಸಂಸ್ಥೆ ಟೆಸ್ಲಾ ಇಂಡಿಯಾ ಮೋಟಾರ್ ಮತ್ತು ಎನರ್ಜಿ ಪ್ರೈವೇಟ್ ಪಂಚಶೀಲ ಬ್ಯುಸಿನೆಸ್ ಪಾರ್ಕ್‌ನಲ್ಲಿರುವ ಬಿ ವಿಂಗ್‌ನ ಮೊದಲ ಮಹಡಿಯಲ್ಲಿ 5,580 ಚದರ ಅಡಿ ಕಚೇರಿ ಸ್ಥಳಕ್ಕಾಗಿ ಟೇಬಲ್‌ಸ್ಪೇಸ್ ಟೆಕ್ನಾಲಜೀಸ್‌ ಜೊತೆ ಐದು ವರ್ಷಗಳ ಗುತ್ತಿಗೆ ಒಪ್ಪಂದವನ್ನು ಮಾಡಿಕೊಂಡಿದೆ. ಕಚೇರಿಯ ಬಾಡಿಗೆಯು 1 ಅಕ್ಟೋಬರ್ 2023 ರಂದು ಪ್ರಾರಂಭವಾಗುತ್ತದೆ ಮತ್ತು ಎರಡೂ ಕಂಪನಿಗಳು 36 ತಿಂಗಳುಗಳ ಲಾಕ್-ಇನ್ ಅವಧಿಗೆ ಐದು ಶೇಕಡಾ ವಾರ್ಷಿಕ ಹೆಚ್ಚಳದ ಷರತ್ತನ್ನು ಒಪ್ಪಿಕೊಂಡಿವೆ. ಒಟ್ಟು ಬದ್ಧತೆಯನ್ನು ಹತ್ತು ವರ್ಷಗಳವರೆಗೆ ಮಾಡುವ ಮೂಲಕ ಗುತ್ತಿಗೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸುವ ಆಯ್ಕೆ ಟೆಸ್ಲಾಗೆ ಇದೆ.

ಪ್ರಮುಖ ಸುದ್ದಿ :-   ಬಿಜೆಪಿ ಸೇರಿದ ದೆಹಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ

ಮೇ ತಿಂಗಳಲ್ಲಿ, ಟೆಸ್ಲಾ ತನ್ನ ಭಾರತೀಯ ಅಂಗಸಂಸ್ಥೆಯನ್ನು ಬೆಂಗಳೂರಿನಲ್ಲಿ ನೋಂದಾಯಿಸಿದೆ ಮತ್ತು ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು ಮತ್ತು EV ಬ್ಯಾಟರಿಗಳನ್ನು ಉತ್ಪಾದಿಸುವ ಕಾರ್ಖಾನೆಯನ್ನು ಸ್ಥಾಪಿಸಲು ಯೋಜಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.
ಜೂನ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ ಸಮಯದಲ್ಲಿ ಎಲಾನ್ ಮಸ್ಕ್‌ ಅವರನ್ನು ಭೇಟಿಯಾಗಿದ್ದಾರೆ. ಮಸ್ಕ್‌ ಇದೇವೇಳೆ ಭಾರತದಲ್ಲಿ ಹೂಡಿಕೆ ಮಾಡುವ ಇಂಗಿತವನ್ನು ಭೇಟಿ ವೇಳೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿತ್ತು.
ಇವಿ ಕಂಪನಿ ಟೆಸ್ಲಾ ಪ್ರಸ್ತುತ ಬೆಲೆಗಿಂತ ಶೇಕಡ 25ರಷ್ಟು ಕಡಿಮೆ ದರದಲ್ಲಿ ಟೆಸ್ಲಾ ಇವಿಗಳನ್ನು ಮಾರಾಟ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂಬ ಮಾಹಿತಿಯಿದೆ. ಭಾರತದ ಮಾರುಕಟ್ಟೆಯಲ್ಲಿ ಟೆಸ್ಲಾ ವಾಹನದ ಬೆಲೆ 24,000 ಡಾಲರ್ ಆಗಿರಬಹುದು ಎಂದು ಈ ತಿಂಗಳ ಆರಂಭದಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ ಮಾಡಿದೆ. ಇಲೆಕ್ಟ್ರಿಕ್ ವಾಹನಗಳು ಪ್ರಸ್ತುತ ಭಾರತದಲ್ಲಿ ಒಟ್ಟು ವಾಹನ ಮಾರಾಟದಲ್ಲಿ ಶೇಕಡ 2ಕ್ಕಿಂತ ಕಡಿಮೆಯಿದೆ. ಹಾಗೆಯೇ ಭಾರತ ಈಗ ವಿಶ್ವದ ಮೂರನೇ ಅತಿದೊಡ್ಡ ವಾಹನ ಮಾರುಕಟ್ಟೆಯಾಗಿದೆ.

ಪ್ರಮುಖ ಸುದ್ದಿ :-   'ಪ್ರಿಯಾಂಕಾ ಗಾಂಧಿ ವಿರುದ್ಧ ಪಕ್ಷದಲ್ಲೇ ದೊಡ್ಡ ಪಿತೂರಿ...ಜೂನ್ 4ರ ನಂತರ ಕಾಂಗ್ರೆಸ್ ಅಣ್ಣ-ತಂಗಿ ಬಣಗಳಾಗಿ ವಿಭಜನೆ' : ಕಾಂಗ್ರೆಸ್‌ ಮಾಜಿ ನಾಯಕನ ಸ್ಫೋಟಕ ಹೇಳಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement