ಭಾರತೀಯ ಅಂಚೆ ಇಲಾಖೆಯಿಂದ 30,041 ಹುದ್ದೆಗೆ ಅರ್ಜಿ ಆಹ್ವಾನ : 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ಅಂಚೆ ಇಲಾಖೆಯು 30,041 ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್‌ ಸೇವಕ, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.
ಅಂಚೆ ಇಲಾಖೆಯ ಈ ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಿದವರನ್ನು ಅವರ ವಿದ್ಯಾರ್ಹತೆ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೆ ಯಾವುದೇ ಪರೀಕ್ಷೆ ಇರುವುದಿಲ್ಲ.
ನೇಮಕಾತಿ ಪ್ರಾಧಿಕಾರ : ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಗ್ರಾಮೀಣ ಡಾಕ್ ಸೇವಕ, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್‌ ಮಾಸ್ಟರ್‌
ಭಾರತದಾದ್ಯಂತ ಹುದ್ದೆಗಳ ಸಂಖ್ಯೆ : 30,041
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ : 530
ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ (BPM) : 12,000-29,380 ರೂ.
ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್ (ABPM) : Rs.10,000-24,470 ರೂ..
ಡಾಕ್ ಸೇವಕ್‌ : 10,000-24,470 ರೂ.
ಗ್ರಾಮೀಣ ಡಾಕ್‌ ಸೇವಕ ಹುದ್ದೆಗೆ ಅರ್ಹತೆ : ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳಿಗೆ ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು. ಕರ್ನಾಟಕದ ಅಭ್ಯರ್ಥಿಗಳಿಗೆ ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು. ಅಲ್ಲದೆ, ಬೇಸಿಕ್ ಕಂಪ್ಯೂಟರ್ ಜ್ಞಾನ ಗೊತ್ತಿರಬೇಕು ಹಾಗೂ ಪ್ರಮಾಣ ಪತ್ರ ಹೊಂದಿರಬೇಕು.
ವಯಸ್ಸಿನ ಅರ್ಹತೆ : ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕ 23-08-2023 ಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು.ಗರಿಷ್ಠ 40 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದವರಿಗೆ 5 ವರ್ಷ, ಹಿಂದುಳಿದ ವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿವೆ.
ಅಂಚೆ ಗ್ರಾಮೀಣ ಡಾಕ್‌ ಸೇವಕ್‌ ಹುದ್ದೆಗೆ ಆಯ್ಕೆ ಹೇಗೆ…?
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್‌ ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ನೇಮಕಾತಿ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ಮೊದಲ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ವರದಿ ಮಾಡಿಕೊಳ್ಳದಿದ್ದಲ್ಲಿ, ಮತ್ತೆ ಎರಡನೇ ಅರ್ಹತಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಮಹತ್ವದ ದಿನಾಂಕಗಳು…
ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸಲು ಆರಂಭ ದಿನಾಂಕ : 03-08-2023
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 23-08-2023
ಅಪ್ಲಿಕೇಶನ್‌ ತಿದ್ದುಪಡಿಗೆ ಅವಕಾಶ : 24-08-2023 ರಿಂದ 26-08-2023
ಅರ್ಜಿ ಶುಲ್ಕ ರೂ.100.
ಹೆಚ್ಚಿನ ಮಾಹಿತಿಗೆ ನೋಟಿಫಿಕೇಶನ್‌ ನೋಡಲು  http://IndianPost GDS Recruitment 2023 Schedule II – Notification   ಇಲ್ಲಿ ಕ್ಲಿಕ್‌ ಮಾಡಿ ನೋಡಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ವೆಬ್‌ಸೈಟ್‌ ವಿಳಾಸ https://indiapostgdsonline.gov.in/Reg_validation.aspx   ಕ್ಕೆ ಭೇಟಿ ನೀಡಿ ಮೊದಲಿಗೆ ರಿಜಿಸ್ಟ್ರೇಷನ್‌ ಪಡೆಯಬೇಕು. ನಂತರ ಮತ್ತೆ ಲಾಗಿನ್‌ ಆಗುವ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿ, ಅರ್ಜಿ ಪೂರ್ಣಗೊಳಿಸಬೇಕು.
ಸಂಸ್ಥೆಯ ಹೆಸರು ಭಾರತೀಯ ಅಂಚೆ ಇಲಾಖೆ
ವೆಬ್‌ಸೈಟ್‌ ವಿಳಾಸ    http://appost.in/gdsonline   ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ನೇಮಕಾತಿ 2023 ಗಾಗಿ ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇತರ ಯಾವುದೇ ವಿಧಾನಗಳ ಮೂಲಕ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.

ಪ್ರಮುಖ ಸುದ್ದಿ :-   ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement