ಉತ್ತರಾಖಂಡ : ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದಲ್ಲಿ ಗೌರಿಕುಂಡ್ ಬಳಿ ದೊಡ್ಡ ಭೂಕುಸಿತದಿಂದಾಗಿ ನಾಶವಾದ ಅಂಗಡಿಗಳ ಅವಶೇಷಗಳಲ್ಲಿ ಹಲವರು ಹೂತುಹೋಗಿರಬಹುದು ಎಂದು ಶಂಕಿಸಲಾಗಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್‌ಡಿಆರ್‌ಎಫ್) ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ.
ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ.
ರುದ್ರಪ್ರಯಾಗ ವಿಪತ್ತು ನಿರ್ವಹಣೆಯ ಅಧಿಕಾರಿಯ ಪ್ರಕಾರ, ಭೂಕುಸಿತದಲ್ಲಿ 10 ರಿಂದ 12 ಜನರು ಸಮಾಧಿಯಾಗುವ ಅಥವಾ ಕೊಚ್ಚಿಹೋಗುವ ಭೀತಿಯಿದೆ. ಗೌರಿಕುಂಡ ಪೋಸ್ಟ್ ಸೇತುವೆ ಬಳಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಭೂಕುಸಿತದಿಂದ ಮೂರು ಅಂಗಡಿಗಳು ಹಾನಿಗೀಡಾಗಿವೆ ಎಂದು ವರದಿಯಾಗಿದೆ.
ಬಂಡೆಗಳು ಬೀಳುವ ಮತ್ತು ಭಾರೀ ಮಳೆಯಿಂದಾಗಿ ಮೂರು ಅಂಗಡಿಗಳು ಹಾನಿಗೊಳಗಾಗಿವೆ ಎಂದು ನಮಗೆ ಮಾಹಿತಿ ಸಿಕ್ಕಿತು … ತಕ್ಷಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಸುಮಾರು 10-12 ಜನರು ಅಲ್ಲಿದ್ದರು ಎಂದು ಹೇಳಲಾಗಿದೆ ಆದರೆ ಇಲ್ಲಿಯವರೆಗೆ ಅವರು ಪತ್ತೆಯಾಗಿಲ್ಲ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ದಲೀಪ್ ಸಿಂಗ್ ರಾಜ್ವಾರ್
ಭಾರಿ ಮಳೆಯಿಂದಾಗಿ ಅಂಗಡಿಗಳ ಮೇಲೆ ಕಲ್ಲು ಬಂಡೆಗಳು ಬಿದ್ದಿದ್ದು, ಮೂರು ಅಂಗಡಿಗಳು ಹಾನಿಗೀಡಾಗಿವೆ. ಈ ಪ್ರದೇಶದಲ್ಲಿ ಸುಮಾರು 10-12 ಜನ ಇದ್ದರು ಎಂದು ಹೇಳಲಾಗಿದೆ. ಇಲ್ಲಿವರೆಗೆ ಯಾರೊಬ್ಬರೂ ಪತ್ತೆಯಾಗಿಲ್ಲ ಎಂದು ಎಸ್‌ಪಿ ಡಾ.ವಿಶಾಖಾ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ