ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ನೇತೃತ್ವದಲ್ಲಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾದ ಬಿಬಿಎಂಪಿಯ 29 ವಿಧಾನಸಭಾ ಕ್ಷೇತ್ರದ 45 ಕಂದಾಯ ಅಧಿಕಾರಿ (ಆರ್ಒ) ಮತ್ತು ಸಹಾಯಕ ಕಂದಾಯ ಅಧಿಕಾರಿ (ಎಆರ್ಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಬಿಬಿಎಂಪಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆಗೆ ಬಿಬಿಎಂಪಿಯ 28 ವಿಧಾನಸಭಾ ಕ್ಷೇತ್ರಗಳ 45 ಬಿಬಿಎಂಪಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಈ ವೇಳೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಸ್ವತಃ ದಾಳಿಯ ನೇತೃತ್ವ ವಹಿಸಿದ್ದಾರೆ. ಬಿಬಿಎಂಪಿ ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಯುತ್ತಿದೆ.
ಬಿಬಿಎಂಪಿ ವ್ಯಾಪ್ತಿಯ ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಅಧಿಕಾರಿ ಕಚೇರಿಗಳು ಹಾಗೂ ಎಆರ್ಒ ಕಚೇರಿಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ