ಅಮೆರಿಕದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಗೆ ಭಾರತಕ್ಕೆ ಮರಳಲು ನೆರವಿಗೆ ಮುಂದಾದ ಭಾರತೀಯ ದೂತಾವಾಸ

ಚಿಕಾಗೋ: ಕಳೆದ ವಾರ ಚಿಕಾಗೋ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಗೆ ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಶನಿವಾರ ವೈದ್ಯಕೀಯ ಮತ್ತು ಪ್ರಯಾಣದ ನೆರವಿನ ಆಫರ್‌ ನೀಡಿದೆ ಮತ್ತು ಮಹಿಳೆ ಪ್ರಯಾಣಿಸಲು”ಫಿಟ್” ಆಗಿದ್ದಾರೆ ಎಂದು ಹೇಳಿದೆ.
“ನಾವು ಸೈಯದಾ ಜೈದಿ ಅವರನ್ನು ಸಂಪರ್ಕಿಸಿದ್ದೇವೆ ಮತ್ತು ವೈದ್ಯಕೀಯ ನೆರವು ಮತ್ತು ಭಾರತಕ್ಕೆ ಪ್ರಯಾಣ ಸೇರಿದಂತೆ ಅವರಿಗೆ ಸಹಾಯವನ್ನು ನೀಡಲು ಸಂತೋಷವಾಗಿದೆ. ಅವರು ಫಿಟ್ ಆಗಿದ್ದಾರೆ ಮತ್ತು ಭಾರತದಲ್ಲಿರುವ ತನ್ನ ತಾಯಿಯೊಂದಿಗೆ ಮಾತನಾಡಿದ್ದಾರೆ. ಆದರೆ ಭಾರತಕ್ಕೆ ವಾಪಸ್‌ ಆಗಲು ನಮ್ಮ ನೆರವಿನ ಪ್ರಸ್ತಾಪಕ್ಕೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. ನಾವು ಕಾಯುತ್ತಿದ್ದೇವೆ. ಹಾಗೂ ಆಕೆಗೆ ಎಲ್ಲ ನೆರವು ನೀಡಲು ಸಿದ್ಧ ಎಂದು ದೂತಾವಾಸ ಟ್ವೀಟ್‌ನಲ್ಲಿ ತಿಳಿಸಿದೆ.
ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಸೈಯದಾ ಲುಲು ಮಿನ್ಹಾಜ್ ಜೈದಿ ಚಿಕಾಗೋದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿರುವುದು ಒಂದು ವಾರದ ಹಿಂದೆ ಸುದ್ದಿಯಾಗಿತ್ತು. ಹೆಚ್ಚಿನ ತನಿಖೆ ನಂತರ ಆಕೆಯ ಎಲ್ಲಾ ವಸ್ತುಗಳನ್ನು ಕಳವು ಮಾಡಲಾಗಿದ್ದು, ಆಕೆ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.
ತೆಲಂಗಾಣ ಮೂಲದ ಮಜ್ಲಿಸ್ ಬಚಾವೋ ತೆಹ್ರೀಕ್ (MBT) ಪಕ್ಷದ ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಅವರು ಸೈಯದಾ ಲುಲು ಮಿನ್ಹಾಜ್ ಜೈದಿ ಅವರ ಸ್ಥಿತಿಯನ್ನು ಮುನ್ನೆಲೆಗೆ ತಂದರು. ಆಕೆ ಅಮೆರಿಕದ ಬೀದಿಯಲ್ಲಿ ನಿರ್ಗತಿಕಳಾಗಿ ಕಾಣಿಸಿಕೊಂಡ ನಂತರ, ಆಕೆಯ ತಾಯಿ ಸೈಯದಾ ವಹಾಜ್ ಫಾತಿಮಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದು “ತಕ್ಷಣ ಮಧ್ಯಪ್ರವೇಶಿಸಬೇಕು ಮತ್ತು “ಸಾಧ್ಯವಾದಷ್ಟು ಬೇಗ” ತನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಒತ್ತಾಯಿಸಿದ್ದರು.

ಪ್ರಮುಖ ಸುದ್ದಿ :-   ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

“ನನ್ನ ಮಗಳು ಸೈಯದಾ ಲುಲು ಮಿನ್ಹಾಜ್ ಜೈದಿ ಅವರು ಆಗಸ್ಟ್ 2021 ರಲ್ಲಿ ಅಮೆರಿಕದ ಡೆಟ್ರಾಯಿಟ್‌ನ TRINE ವಿಶ್ವವಿದ್ಯಾಲಯದಿಂದ ಮಾಹಿತಿ ವಿಜ್ಞಾನದಲ್ಲಿ ತನ್ನ ಸ್ನಾತಕೋತ್ತರ ಪದವಿಯನ್ನು ಪಡೆಯಲು ಹೋಗಿದ್ದಳು… ಅವಳು ನಮ್ಮೊಂದಿಗೆ ಸಂಪರ್ಕದಲ್ಲಿದ್ದಳು. ಕಳೆದ ಎರಡು ತಿಂಗಳಿನಿಂದ ಅವಳು ಸಂಪರ್ಕದಲ್ಲಿ ಇರಲಿಲ್ಲ. ಇತ್ತೀಚೆಗೆ, ಇಬ್ಬರು ಹೈದರಾಬಾದಿ ಯುವಕರ ಮೂಲಕ ನನ್ನ ಮಗಳು ತೀವ್ರ ಖಿನ್ನತೆಗೆ ಒಳಗಾಗಿದ್ದಾಳೆ ಮತ್ತು ಅವಳ ಎಲ್ಲಾ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಹಾಗೂ ಅವಳು ಹಸಿವಿನಿಂದ ಬಳಲುತ್ತಿದ್ದಾಳೆ ಮತ್ತು ಚಿಕಾಗೋದ ರಸ್ತೆಗಳಲ್ಲಿ ಅಲೆದಾಡುತ್ತಿದ್ದಾಳೆ ಎಂದು ನಾವು ತಿಳಿದುಕೊಂಡಿದ್ದೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತದ ರಾಯಭಾರ ಕಚೇರಿ ಮತ್ತು ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ದೂತಾವಾಸವು ತಕ್ಷಣವೇ ಮಧ್ಯಪ್ರವೇಶಿಸಿ ನನ್ನ ಮಗಳನ್ನು ಭಾರತಕ್ಕೆ ಕರೆತರುವಂತೆ ವಿನಂತಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ತಿಳಿಸಬಹುದು ಎಂದು ಹೇಳಿದ್ದರು.

ಆಕೆ ಭಾರತಕ್ಕೆ ಮರಳಲು ಅನುಕೂಲ ಮಾಡಿಕೊಡುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡಿದ್ದೇವೆ ಎಂದು “ನನ್ನ ಟ್ವೀಟ್ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಚಿಕಾಗೋದಲ್ಲಿರುವ ಭಾರತೀಯ ದೂತಾವಾಸದಿಂದ ಅವಳು ಸದ್ಯ ತಕ್ಷಣ ಪ್ರಯಾಣಿಸುವ ಸ್ಥಿತಿಯಲ್ಲಿಲ್ಲ ಎಂದು ನನಗೆ ಉತ್ತರ ಬಂದಿತು ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (MBT) ವಕ್ತಾರರು ತಿಳಿಸಿದ್ದಾರೆ.
ಅವಳನ್ನು ನೋಡಿಕೊಳ್ಳಲು ನಾವು ಆಕೆಯ ಪೋಷಕರನ್ನು ಚಿಕಾಗೋಗೆ ಕಳುಹಿಸಲು ಪ್ರಯತ್ನಿಸುತ್ತಿದ್ದೇವೆ. ಪೋಷಕರ ಬಳಿ ಪಾಸ್‌ಪೋರ್ಟ್ ಇಲ್ಲ. ಹೈದರಾಬಾದ್‌ನಲ್ಲಿರುವ ಅಮೆರಿಕದ ಕಾನ್ಸುಲೇಟ್‌ನಿಂದ ಪಾಸ್‌ಪೋರ್ಟ್ ಮತ್ತು ವೀಸಾಗಳನ್ನು ಪಡೆಯಲು ಸಹಾಯ ಮಾಡುವಂತೆ ನಾವು ತೆಲಂಗಾಣ ಐಟಿ ಸಚಿವ ಕೆಟಿ ರಾಮ ರಾವ್‌ ಅವರಿಗೆ ಮನವಿ ಮಾಡಿದ್ದೇವೆ. ಅನೇಕ ವ್ಯಕ್ತಿಗಳು ಮತ್ತು ಸಂಸ್ಥೆಗಳು ಅವರ ಅಮೆರಿಕಕ್ಕೆ ತೆರಳುವುದಕ್ಕೆ ನೆರವು ನೀಡಲು ಮುಂದೆ ಬಂದಿವೆ ಎಂದು ಅವರು ಹೇಳಿದರು.
ನಾವು ಸರ್ಕಾರದಿಂದ ತ್ವರಿತ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದೇವೆ. ನಾವು ಎಸ್. ಜೈಶಂಕರ್ ಮತ್ತು ಚಿಕಾಗೋದಲ್ಲಿನ ಭಾರತೀಯ ದೂತಾವಾಸಕ್ಕೆ ಮತ್ತು ಅವರಿಗೆ ಸಹಾಯ ಮಾಡಲು ಮುಂದೆ ಬಂದಿರುವ ಎಲ್ಲಾ ಸಂಸ್ಥೆಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಖಾನ್ ಹೇಳಿದರು.

ಪ್ರಮುಖ ಸುದ್ದಿ :-   ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement