ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ʼಗೃಹಜ್ಯೋತಿʼ ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಅಜಯ ಸಿಂಗ್ ಗೈರು: ತೀವ್ರ ಚರ್ಚೆಗೆ ಗ್ರಾಸ

ಕಲಬುರಗಿ: ಶನಿವಾರ ನಗರದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಗೃಹ ಜ್ಯೋತಿʼ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ ಹಾಗೂ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ ಸಿಂಗ್‌ ಗೈರಾಗುವ ಮೂಲಕ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಗೃಹ ಜ್ಯೋತಿ ಯೋಜನೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.‌ಶರಣಪ್ರಕಾಶ ಪಾಟೀಲ, ಶರಣಬಸಪ್ಪ ದರ್ಶನಾಪುರ, ಈಶ್ವರ ಖಂಡ್ರೆ ಮೊದಲಾದ ನಾಯಕರು ಪಾಲ್ಗೊಂಡಿದ್ದರು. ಆದರೆ ಆದರೆ ತಮ್ಮ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮೂರನೇ ಬಾರಿಗೆ ಶಾಸಕರಾಗಿರುವ ಜೇವರ್ಗಿ ಕ್ಷೇತ್ರದ ಡಾ. ಅಜಯಸಿಂಗ್ ಮಾತ್ರ ಗೈರು ಹಾಜರಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.‌ ಯಾಕೆಂದರೆ ಅಜಯ್ ಸಿಂಗ್ ಹೊರತುಪಡಿಸಿ ಜಿಲ್ಲೆಯ ಉಳಿದೆಲ್ಲಾ ಕಾಂಗ್ರೆಸ್​​ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯ ಆಳಂದ ಶಾಸಕ ಬಿ.ಆರ್. ಪಾಟೀಲ ಶಾಸಕಾಂಗ ಸಭೆ ಕರೆಯುವಂತೆ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದು ಸಂಚಲನ ಮೂಡಿಸಿರುವ ನಡುವೆ ಜಿಲ್ಲೆಯ ಮತ್ತೋರ್ವ ಶಾಸಕ ಡಾ. ಅಜಯಸಿಂಗ್ ಅವರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಗೈರಾಗಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement