ಶಿರಸಿ: ಗದ್ದೆಗೆ ಉರುಳಿದ ಬಸ್‌, ಹಲವರಿಗೆ ಗಾಯ

ಶಿರಸಿ : ಕುಮಟಾ-ಶಿರಸಿ ರಸ್ತೆಯ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗದ್ದೆಗೆ ಪಲ್ಟಿಯಾದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ ಎಂದು ವರದಿಯಾಗಿದೆ.
ಬಸ್‌ ಮಂಗಳೂರಿನಿಂದ ಕುಷ್ಟಗಿಗೆ ಹೋಗುತ್ತಿತ್ತು. ಹನುಮಂತಿ ಬಳಿ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ಪಲ್ಟಿ ಹೊಡೆದಿದ್ದರಿಂದ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಆದರೆ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಶಿರಸಿಯ ಪಂಡಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ 10-12 ಜನರಿದ್ದರು ಎಂದು ಹೇಳಲಾಗಿದೆ.

3 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement