ಬೆಂಗಳೂರು: ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ನೀವು ಈ ಕೂಡಲೇ ಭ್ರಷ್ಟ ಸಚಿವರ ರಾಜೀನಾಮೆ ಪಡೆದುಕೊಳ್ಳಬೇಕು ಅಥವಾ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ಎಂದು ಕಾಂಗ್ರೆಸ್ ಸರ್ಕಾರದ ಬಿಜೆಪಿ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಈ ಹಿಂದೆ ಶಾಸಕರ ಪತ್ರ ನಕಲು ಎಂದು ಹೇಳಿದ್ದ ನೀವು, ಈಗ ನಿಮ್ಮ ಸಚಿವರ ಕರ್ಮಕಾಂಡ ಬಯಲು ಮಾಡುವ ಪತ್ರವೂ ನಕಲು ಎನ್ನುತ್ತಿರೋ ಎಂದು ಬಿಜೆಪಿ ಪ್ರಶ್ನಿಸಿದೆ.
ಸಚಿವರಾದ ಮೊದಲ ದಿನದಿಂದಲೇ ವಸೂಲಿ, ವರ್ಗಾವಣೆ, ದ್ವೇಷದ ರಾಜಕಾರಣಕ್ಕೆ ಮುನ್ನುಡಿ ಬರೆದ ಚೆಲುವರಾಯಸ್ವಾಮಿ, 6 ರಿಂದ 8 ಲಕ್ಷ ರೂಪಾಯಿ ಕಮಿಷನ್‌ಗಾಗಿ ತನ್ನ ಇಲಾಖೆಯ ಮೇಲಾಧಿಕಾರಿಗಳನ್ನು ಕಲೆಕ್ಷನ್ ಏಜೆಂಟ್‌ಗಳನ್ನಾಗಿ ಮಾಡಿಕೊಂಡಿದ್ದಾರಂತೆ ನೋಡಿ ಎಂದು ಬಿಜೆಪಿ ಕಾಲೆಳೆದಿದೆ. ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ ಒಂದೇ ಗ್ಯಾರಂಟಿ. ಮಾನ್ಯ ಸಿದ್ದರಾಮಯ್ಯನವರೇ, ಇದರಲ್ಲಿ ಯಾರ್ಯಾರ ಪಾಲೆಷ್ಟು..? ಎಂದು ಪ್ರಶ್ನಿಸಿದೆ.
ಬಸನಗೌಡ ಪಾಟಿಲ ಯತ್ನಾಳ ಆರೋಪ…
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ‘ಕ್ಯಾಶ್ ಆ್ಯಂಡ್ ಕ್ಯಾರಿ’ ಎಂದು ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ಕ್ಯಾಶ್ ಆ್ಯಂಡ್ ಕ್ಯಾರಿ. ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು? ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಒಬ್ಬಬ್ಬರಿಗೂ 6-8 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ, ನಾವು ಆತ್ಮಹತ್ಯೆ ಮಾಡಿಕೊಳ್ಳದೆ ದಾರಿಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹೊರತುಪಡಿಸಿ ಇನ್ನೇನು ನಡೆಯುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ