ಉಡುಪಿ ಕಾಲೇಜು ವೀಡಿಯೊ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಉಡುಪಿ: ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪ್ರಕರಣದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದರು ಎಂದು ಆರೋಪಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿತ್ತು. ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಪ್ರಕರಣ ಭಾರೀ ಸದ್ದು ಮಾಡಿದ್ದರಿಂದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಅದಾದ ಬಳಿಕ ತನಿಖಾಧಿಕಾರಿಯನ್ನು ಕೂಡ ಬದಲಾಯಿಸಿ, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.
ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗವು ಕೂಡ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು ಹಾಗೂ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ ಅವರು ಉಡುಪಿಗೆ ಎರಡು ದಿನ ಭೇಟಿ ನೀಡಿ ತನಿಖೆ ನಡೆಸಿದ್ದರು. ಅಲ್ಲದೆ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ, ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ಈ ಬಗ್ಗೆ ಮನವಿ ಮಾಡಿದ್ದರು.

ಪ್ರಮುಖ ಸುದ್ದಿ :-   ಇನ್ಮುಂದೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ; ಬಿಬಿಎಂಪಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement