ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಬ್ಯಾಂಕಾಕಿನಲ್ಲಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ
ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬ ಸದಸ್ಯರು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಸ್ಪಂದನಾ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ನಾಳೆ ಬೆಂಗಳೂರಿಗೆ ಸ್ಪಂದನಾ ಪಾರ್ಥಿವ ಶರೀರ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಸ್ಪಂದನಾ ಮತ್ತು ವಿಜಯ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ.
ಸ್ಪಂದನಾ 2016 ರಲ್ಲಿ ತೆರೆಕಂಡ ರವಿಚಂದ್ರನ್ ಅವರ ಅಪೂರ್ವ ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೆ ಸಿನಿಮಾ ನಿರ್ಮಾಣದಲ್ಲಿಯೂ ಇದ್ದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

ಸ್ಪಂದನಾ ವಿಜಯ ರಾಘವೇಂದ್ರ ಜೊತೆ ಸಿನಿಮಾವೊಂದರಲ್ಲಿ ಬಣ್ಣ ಹಚ್ಚಿದ್ದರು. ರವಿಚಂದ್ರನ್ ನಟಿಸಿ, ನಿರ್ದೇಶಿಸಿದ್ದ ‘ಅಪೂರ್ವ’ ಚಿತ್ರದಲ್ಲಿ ವಿಜಯ್ ರಾಘವೇಂದ್ರ ಜೊತೆಗೆ ಸ್ಪಂದನಾ  ಅತಿಥಿ ಪಾತ್ರ ಮಾಡಿದ್ದರು. ಆ ಸಿನಿಮಾದಲ್ಲಿ ಈ ಜೋಡಿ ತೆರೆಮೇಲೆಯೂ ದಂಪತಿಯಾಗಿಯೇ ಕಾಣಿಸಿಕಂಡಿದ್ದರು. ಅಲ್ಲದೆ, ವಿಜಯ ರಾಘವೇಂದ್ರ ನಟಿಸಿ, ನಿರ್ದೇಶಿಸಿದ್ದ ‘ಕಿಸ್ಮತ್’ ಚಿತ್ರವನ್ನು ಸ್ಪಂದನಾ ನಿರ್ಮಾಣ ಮಾಡಿದ್ದರು.

ಸ್ಪಂದನಾ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. “ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿ ಟ್ವೀಟ್‌ ಮಾಡಿದ್ದಾರೆ.
ಕನ್ನಡದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಬ್ಯಾಂಕಾಕ್‍ನಲ್ಲಿ ದಿಢೀರ್ ಸಾವಿಗೀಡಾಗಿರುವ ಸಂಗತಿ ತಿಳಿದು ಅಪಾರ ನೋವುಂಟಾಯಿತು. ಇತ್ತೀಚೆಗಷ್ಟೇ ಅವರು ನನ್ನನ್ನು ಭೇಟಿಯಾಗಿ ಶುಭ ಹಾರೈಸಿದ್ದರು. ಸ್ಪಂದನಾ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರು ಹಾಗೂ ಸ್ನೇಹಿತ ವರ್ಗಕ್ಕೆ ನನ್ನ ಸಾಂತ್ವನಗಳು” ಎಂದು ಟ್ವೀಟ್‍ ಮಾಡಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement