ಬಿಜೆಪಿ ಹೈಕಮಾಂಡ್‌ ಬುಲಾವ್‌: ಮಾಜಿ ಸಿಎಂ ಬೊಮ್ಮಾಯಿ ದೆಹಲಿಗೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರಿಂದ ಈಗ ಬುಲಾವ್‌ ಬಂದಿದೆ. ಬೊಮ್ಮಾಯಿಯವರು ಭಾನುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ವಿಧಾನ ಮಂಡಲ ಪ್ರತಿಪಕ್ಷ ನಾಯಕರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ವರಿಷ್ಠರ ವಿಳಂಬ ಧೋರಣೆ ರಾಜ್ಯ ನಾಯಕರನ್ನು ಪೇಚಿಗೆ ಸಿಲುಕಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 2 ತಿಂಗಳು ಕಳೆದರೂ ಪ್ರತಿಪಕ್ಷವಾದ ಬಿಜೆಪಿ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಹಲವು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದರೂ ಇತ್ತ ಕರ್ನಾಟಕದಲ್ಲಿ ಆಗಿಲ್ಲ. ಹೀಗಾಗಿ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಅಂತಿಮ ಕಸರತ್ತು ನಡೆಯುತ್ತಿದೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ಬಂದಿದೆ. ಇಂದು, ಸೋಮವಾರ ಅವರು ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement