ನರ್ಸ್‌ಗಳ ಮೇಲೆ ಅವಹೇಳನಕಾರಿ ರೀಲ್ಸ್ : 15 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿ: ನರ್ಸ್‌ಗಳ ಮೇಲೆ ಅವಹೇಳನಕಾರಿಯಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಕ್ಕಾಗಿ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯೊಂದರ 15 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆಎಂದು ವರದಿಯಾಗಿದೆ.
ಅಲ್ಲದೆ ಹರಿಬಿಟ್ಟ ವಿಡಿಯೋದ ಕುರಿತು ವಿಚಾರಣೆ ನಡೆಸಲು ಏಳು ಸದಸ್ಯರ ಸಮಿತಿ ರಚಿಸಲಾಗಿದೆ. ನರ್ಸ್‌ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಕಿಮ್ಸ್ ನ ಎಂಬಿಬಿಎಸ್ ವಿದ್ಯಾರ್ಥಿಗಳು, ಭದ್ರ ಚಿತ್ರದ ಹಾಡಿಗೆ ರೀಲ್ಸ್ ಮಾ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಅದು ವೈರಲ್ ಆಗಿತ್ತು. ಇದರಿಂದ ಆಕ್ರೋಶಗೊಂಡ ನರ್ಸ್‌ಗಳು ತಮ್ಮನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಕಿಮ್ಸ್ ನ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ್ದರು ಹಾಗೂ ರೀಲ್ಸ್ ಮಾಡಿದ್ದ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಿಮ್ಸ್ ನ ನಿರ್ದೇಶಕರು ಮತ್ತು ಆಡಳಿತ ಮಂಡಳಿಯವರಿಗೆ ಆಗ್ರಹಿಸಿದ್ದರು. ನಿರ್ದೇಶಕರು ಕಾಲೇಜಿನ 15 ಎಂಬಿಬಿಎಸ್ ವಿದ್ಯಾರ್ಥಿಗಳನ್ನು ತರಗತಿಗಳಿಂದ ಅಮಾನತು ಮಾಡಿದ್ದಾರೆ. ಜೊತೆಗೆ ಇದರ ವಿಚಾರಣೆಗಾಗಿ ಪ್ರಾಂಶುಪಾಲ ಡಾ. ಈಶ್ವರ ಹೊಸಮನಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರ ಸಮಿತಿ ರಚಿಸಿದ್ದು, ಆಗಸ್ಟ್‌ 11ರೊಳಗಾಗಿ ವರದಿ ಸಲ್ಲಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ರೀಲ್ಸ್‌ ಮಾಡಿದ್ದು ತೀವ್ರ ಟೀಕೆಗೆ ಗುರಿಯಾದ ನಂತರ, ಅಮಾನತುಗೊಂಡ ವಿದ್ಯಾರ್ಥಿಗಳು ಮತ್ತೊಂದು ವೀಡಿಯೊ ಮಾಡಿ ನರ್ಸ್‌ಗಳನ್ನು ಕ್ಷಮೆಯಾಚಿಸಿದರು. ಅಲ್ಲದೆ ಇದನ್ನು ತಮಾಷೆಗಾಗಿ ಮಾಡಿದ್ದಾಗಿ ಹೇಳಿ ವೀಡಿಯೊ ಮೂಲಕ ಕ್ಷಮೆ ಕೋರಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement